ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ

Spread the love

ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ

ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ, ಕಳಪೆ ಕಾಮಗಾರಿ, ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ಹಾಗೂ ಕಚೇರಿಯಲ್ಲಿ ಮಿತಿಮೀರಿದ ದಲ್ಲಾಳಿಗಳ ಹಾವಳಿಯನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ನಗರ ಸಭಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದಾರೆ.

ನಗರಸಭೆಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದು, ನಗರಸಭಾ ಕಚೇರಿಯನ್ನು ಕಾಂಗ್ರೆಸ್ ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೇ ದಿವ್ಯ ನಿರ್ಲಕ್ಷ್ಯವಹಿಸುತ್ತಿದ್ದು ಅಧಿಕಾರಿಗಳು ರಾಜಾರೋಷವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸಗಳಿಗೆ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿಭಟನೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರಸಭಾ ಸದಸ್ಯರು, ಪಕ್ಷದ ಮುಖಂಡರು, ಸಾರ್ವಜನಿಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love