ಜ21: ಕಾಪುವಿನಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ

Spread the love

ಜ21: ಕಾಪುವಿನಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ

ಉಡುಪಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜನವರಿ 21 ರಂದು (ನಾಳೆ) ಕಾಪುವಿನ K1 ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.

ಎಸ್ ಡಿಪಿಐ ಉಡುಪಿ ಜಿಲ್ಲಾಧ್ಯಕ್ಷರಾದ ಶಾಹಿದ್ ಆಲಿ ಯವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9.30 ಕ್ಕೆ ದ್ವಜಾರೋಹಣದೊಂದಿಗೆ ಈ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್ ತುಂಬೆ, ರಾಜ್ಯ ಉಪಾಧ್ಯಕ್ಷೆಯಾಗಿರುವ ಶಾಹಿದಾ ತಸ್ಲೀಮಾ ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ರವರು ಅತಿಥಿಗಳಾಗಿ ಬಾಗವಹಿಸಲಿದ್ದಾರೆ.

ಪ್ರತೀ ಮೂರು ವರ್ಷಗಳಿಗೆ ಒಮ್ಮೆ ನಡೆಯುವ ಪ್ರತಿನಿಧಿ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಜಿಲ್ಲಾ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಈ ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರು, ಜಿಲ್ಲೆ ವಿವಿದ ವಿಧಾನಸಭಾ ಕ್ಷೇತ್ರ ಸಮಿತಿಯ ಪದಾದಿಕಾರಿಗಳು ಹಾಗೂ ವಿಶೇಷ ಆಹ್ವಾನಿತರು ಬಾಗವಹಿಸಲಿದ್ದಾರೆ ಎಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾಯದರ್ಶಿ ಅಶ್ರಫ್ ಬಾವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love