ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಪ್ರವಾಸ

Spread the love

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಪ್ರವಾಸ

ಮಂಗಳೂರು :ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರ ದ.ಕ ಪ್ರವಾಸ ಇಂತಿವೆ.

ಅಕ್ಟೋಬರ್ 2 ರಂದು ಬೆಳಿಗ್ಗೆ 8 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ, ಪೂರ್ವಾಹ್ನ 9 ಗಂಟೆಗೆ ಮಂಗಳೂರು ಪುರಭವನ ಎದುರುಗಡೆಯ ಗಾಂಧಿ ಪಾರ್ಕ್‍ನಲ್ಲಿ ಭಾರತ ಸೇವಾ ದಳದ ವತಿಯಿಂದ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಪೂರ್ವಾಹ್ನ 9.30 ಗಂಟೆಗೆ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖಾ ವತಿಯಿಂದ ಗಾಂಧೀಜಿಗೆ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 11 ಗಂಟೆಗೆ ಕೆಲ್ಲಗುತ್ತು ಸಖ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆ, ಬೆಳ್ತಂಗಡಿ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ವತಿಯಿಂದ ಗಾಂಧಿಸೃತಿ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಇತರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30 ಗಂಟೆಗೆ ಉಳ್ಳಾಲ ಮಾಸ್ತಿಕಟ್ಟೆ ಜಂಕ್ಷನ್‍ನಲ್ಲಿ ಕೇಂದ್ರ ಸರಕಾರದ ಜನ ವಿರೋಧಿ ನೀತಿಯ ವಿರುದ್ದ ಜನಜಾಗೃತಿ ಅಭಿಯಾನ ಹಾಗೂ ನಗರಸಭಾ ಸದಸ್ಯರುಗಳಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.


Spread the love