ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು

Spread the love

ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು

ಉಡುಪಿ: ಜಿಲ್ಲಾ ಪಂಚಾಯತ್‍ನಲ್ಲಿ ಜಿಲ್ಲಾ ಯೋಜನಾ ಸಮಿತಿ ಸಭೆಯು ಇತ್ತೀಚಿಗೆ ಜಿಲ್ಲಾ ಪಂಚಾಯತ್ ಉಪಧ್ಯಕ್ಷರಾದ ಶೀಲಾ ಕೆ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ನಾಮ ನಿರ್ದೇಶನ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಘೋಷಿಸಿದರು. ನೂತನವಾಗಿ ಆಯ್ಕೆಯಾದ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರನ್ನು ಎಲ್ಲಾ ಸದಸ್ಯರು ಅಭಿನಂದಿಸಿದರು.
ಸಭೆಯಲ್ಲಿ ಯೋಜನಾ ಸಮಿತಿಯ ಸದಸ್ಯರ ವಿವರ, ಜಿಲ್ಲಾ ಯೋಜನಾ ಸಮಿತಿಯ ಪ್ರಕಾರ್ಯಗಳು, ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆ ಅನುಮೋದನೆ, ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳು, ತಾಲೂಕು ಪಂಚಾಯತ್ ಕಾರ್ಯಕ್ರಮಗಳು, ಗ್ರಾಮ ಪಂಚಾಯತ್ ಕಾರ್ಯಕ್ರಮಗಳ ಬಗ್ಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ನಿಗದಿಗೊಳಿಸಿ ಅನುದಾನಕ್ಕೆ ಸರಿಯಾಗಿ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾ ಯೋಜನಾ ಸಮಿತಿಗೆ ಕಳುಹಿಸಬೇಕಾಗಿರುವುದಾಗಿ ತಿಳಿಸಲಾಯಿತು.
ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಯೋಜನೆಗಳು ಜಿಲ್ಲಾ ಯೋಜನಾ ಸಮಿತಿಗೆ ಮಂಡಿಸಿ ಚರ್ಚೆಯಾಗಬೇಕು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸಲಹಯೆಗಲನ್ನು ಕೊಡಬಹುದೆಂದು ತಿಳಲಿಸಲಾಯಿತು. ಘನ ಮತ್ತು ದ್ರವ ತ್ಯಾಜ್ಯಗಳ ವಿಲೇವಾರಿ, ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ, ಜಿಲ್ಲೆಯಲ್ಲಿ ಪೈಪ್ ಕಾಂಪೋಸ್ಟಿಂಗ್, ಮುಖಾಂತರ ಕಸ ವಿಲೇವಾರಿ, ಜಿಲ್ಲೆಯಲ್ಲಿ ಅಂತರ್ಜಲ ಮರುಪೂರಣ ಕಾರ್ಯಕ್ರಮ ಅನುಷ್ಟಾನ, ಕಿಂಡಿ ಅಣೆಕಟ್ಟುಗಳ ನಿರ್ವಹಣೆ, ಕೆರೆ ಹೂಳೆತ್ತುವ ಬಗ್ಗೆ ಮಾಹಿತಿ ನೀಡಲಾಯಿತು. ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗೆ ಕಾಮಗಾರಿಗಳನ್ನು ನಮ್ಮ ಗ್ರಾಮ ನಮ್ಮ ಯೋಜನೆಯಿಂದಲೇ ತೆಗೆದುಕೊಳ್ಳಬೇಕೆಂದು ತಿಳಿಸಲಾಯಿತು.
ಕೆರೆ/ಮದಗಗಳ ಒತ್ತುವರಿ ತಡೆಯಲು ಅವುಗಳ ಸರ್ವೆ ಮಾಡಿ ಗಡಿ ಗುರುತು ಮಾಡಬೇಕೆಂದು ಸದಸ್ಯರು ತಿಳಿಸಿದರು. ಸರ್ಕಾರಿ ಆಸ್ತಿಗಳ ಪಟ್ಟಿಯನ್ನು ಗ್ರಾಮ ಪಂಚಾಯತ್ ಮೂಲಕ ಮಾಡಲಾಗುತ್ತಿದ್ದು, ಕೆರೆ, ಮದಗ, ಕುಡಿಯುವ ನೀರಿನ ಯೋಜನೆ, ಇತ್ಯಾದಿಗಳ ಪಟ್ಟಿ ಮಾಡಲಾಗುತ್ತಿರುವುದಾಗಿ ಮುಖ್ಯ ಯೋಜನಾಧಿಕಾರಿ ಎ.ಶ್ರೀನಿವಾಸ ರಾವ್ ತಿಳಿಸಿದರು. ಸಭೆಯಲ್ಲಿ ಉಪಕಾರ್ಯದರ್ಶಿಯವರಾದ ನಾಗೇಶ್ ರಾಯ್ಕರ್, ಯೋಜನಾ ನಿರ್ದೇಶಕರಾದ ನಯನ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಲು ಉಪಸ್ಥಿತರಿದ್ದರು.


Spread the love