ಜಿಲ್ಲಾ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕ್ರಮಗಳ ಮಾಹಿತಿಯನ್ನು ಕೆಪಿಸಿಸಿಗೆ ನೇರವಾಗಿ ನೀಡಿ; ವಿಷ್ಣುನಾಥ್
ಉಡುಪಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಮೈಸೂರು ವಿಭಾಗೀಯ ಮಟ್ಟದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಬುಧವಾರ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ವಿಷ್ಣುನಾಥನ್ ನೇತೃತ್ವದಲ್ಲಿ ಮಡಿಕೇರಿಯ ಮಯೂರ್ ವ್ಯಾಲಿ ವೀವ್ ಹೋಟೆಲಿನಲ್ಲಿ ಜರುಗಿತು.
ಉಡುಪಿ ಜಿಲ್ಲಾ ಕಾಂಗ್ರೆಸಿನ ಪ್ರತಿನಿಧಿಗಳಾಗಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಹರೀಶ್ ಕಿಣಿ ಭಾಗವಹಿಸಿದ್ದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ವಿಷ್ಣುನಾಥ್ ಅವರು ಜಿಲ್ಲಾ ಸಮಿತಿಯ ಕಾರ್ಯಕ್ರಮಗಳನ್ನು ವರದಿಯನ್ನು ಪಡೆದರಲ್ಲದೆ ಮುಂದಿನ ವಿಧಾನಸಭಾ ಚುನಾವಣೆಗೆ ಯಾವ ರೀತಿಯ ತಯಾರಿಯನ್ನು ನಡೆಸುವುದರ ಕುರಿತು ಮಾಹಿತಿ ನೀಡಿದರು. ಅಲ್ಲದೆ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಸಲಾಗುವ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ಕಾರ್ಯಕ್ರಮ ನಡೆದ ಕೂಡಲೇ ಫೋಟೊ ಸಮೇತವಾಗಿ ಕೆಪಿಸಿಸಿಗೆ ರವಾನಿಸುವಂತೆ ಸೂಚನೆ ನೀಡಿದರು. ಕಾರ್ಯಕ್ರಮಗಳ ಕುರಿತು ಪಾರದರ್ಶಕವಾದ ವರದಿಯನ್ನು ನೀಡುವಂತೆ ಸೂಚಿಸಿದರು. ಮುಂಬರುವ ಚುನಾವಣೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ವ ರೀತಿಯಲ್ಲಿ ಸಜ್ಜಾಗುವುದರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರಕಾರದ ಯೋಜನೆಗಳನ್ನು ಹೆಚ್ಚು ಹೆಚ್ಚು ಪ್ರಚಾರ ಪಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಜಿ ಎ ಬಾವಾ ಹಾಗೂ ಇತರರ ಪದಾಧಿಕಾರಿಗಳು ಭಾಗವಹಿಸಿದ್ದರು.