ಜೂ 22 ರಂದು ಮಹಾಲಕ್ಷ್ಮೀ ಕೋ.ಅಪ್ ಬ್ಯಾಂಕ್ ಮಲ್ಪೆ ನವೀಕೃತ ಶಾಖೆ ಉದ್ಘಾಟನೆ
ಉಡುಪಿ: ಕಳೆದ 42 ವರ್ಷಗಳಿಂದ ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಜನಸ್ನೇಹಿ ಸಹಕಾರಿ ಸಂಸ್ಥೆಯಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಹಕ ವ್ಯವಹಾರ ನಡೆಸುತ್ತಿರುವ ಮಹಾಲಕ್ಷ್ಮೀ ಕೊ ಅಪರೇಟಿವ್ ಬ್ಯಾಂಕಿನ ಮಲ್ಪೆ ನವೀಕೃತ (ಹವಾನಿಯಂತ್ರಿತ) ಶಾಖೆ ಉದ್ಘಾಟನೆ ಸಮಾರಂಭ ಜೂನ್ 22 ರಂದು ಮಧ್ಯಾಹ್ನ 3.15ಕ್ಕೆ ಮಲ್ಪೆ ಏಳೂರು ಮೊಗವೀರ ಸಭಾಭವನದಲ್ಲಿ ನಡೆಯಲಿದೆ.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದು, ಮಹಾಲಕ್ಷ್ಮೀ ಕೋ ಅಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ. ರಘುಪತಿ ಭಟ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಜಿಲ್ಲಾ ಪಂಚಾಯತಿ ಅಧ್ಯಕ್ಷ ದಿನಕರ ಬಾಬು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಭಾಗವಹಿಸಲಿದ್ದಾರೆ.
ಕರಾವಳಿ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಈ ಬ್ಯಾಂಕ್ ಕಳೆದ 9 ವರ್ಷದಿಂದ ನಿರಂತರವಾಗಿ ಸದಸ್ಯರಿಗೆ ಶೇ.18 ಡಿವಿಡೆಂಟ್ ನೀಡುತ್ತಿರುವ ಕರಾವಳಿಯ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬ್ಯಾಂಕ್ ಪ್ರಸ್ತುತ ಯಶಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಉತ್ತಮ ಪ್ರಗತಿ ದಾಖಲಿಸುತ್ತಿದೆ.
ಸಂಸ್ಥೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಲ್ಪೆ, ಗಂಗೊಳ್ಳಿ, ಮಂಗಳೂರು, ಹೆಜಮಾಡಿ, ಸುರತ್ಕಲ್, ಪಡು ಉಚ್ಚಿಲ, ಉಡುಪಿ ಹಾಗೂ ಕುಂದಾಪುರ ಸಹಿತ ಒಟ್ಟು 8 ಶಾಖೆಗಳನ್ನು ಹೊಂದಿದ್ದು, ಈಗಾಗಲೇ ನಮ್ಮ 3 ಶಾಖೆಗಳಾದ ಮಲ್ಪೆ, ಮಂಗಳೂರು, ಕುಂದಾಪುರ ಮತ್ತು ಆಡಳಿತ ಕಚೇರಿ ಸ್ವಂತ ಕಟ್ಟಡದಲ್ಲಿ ವ್ಯವಹರಿಸುತ್ತಿದೆ.
2018-19 ನೇ ಸಾಲಿಗೆ ಬ್ಯಾಂಕಿನಲ್ಲಿ 20664 ಸದಸ್ಯರಿದ್ದು, ಪಾಲು ಬಂಡವಾಳ 6.45 ಕೋಟಿ ರೂ ದುಡಿಯುವ ಬಂಡವಾಳ 149.08 ಕೋಟಿ ರೂ ಠೇವಣಿ 120.04 ಕೋಟಿ ರೂ, ಮುಂಗಡ 89.32 ಕೋಟಿ ರೂ ಐಆಗಿದ್ದು ಬ್ಯಾಂಕ್ ಲೆಕ್ಕಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿದೆ. ಸಹಕಾರ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನವರ ಮೆಚ್ಚುಗೆಗೆ ಪಾತ್ರವಾಗಿದೆ.
ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಮಲ್ಪೆ ಶಾಖೆ ಆಧುನಿಕ ಶೈಲಿಯಲ್ಲಿ (ಹವಾನಿಯಂತ್ರಿತ)ನವೀಕರಣಗೊಂಡಿದ್ದು, ಮುಂದೆ ಸುರತ್ಕಲ್ ಶಾಖೆ ಕೂಡ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.
ಗ್ರಾಹಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಮಲ್ಪೆ ಶಾಖೆಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರವರೆಗೆ ವ್ಯವಹಾರದ ಸಮಯ ವಿಸ್ತರಿಸಲಾಗಿದೆ. ಬ್ಯಾಂಕಿಂಗ್ ಸೇವೆಗಳಿಗೆ ಅತಿ ಅವಶ್ಯಕವೆನಿಸಿರುವ ಆರ್ ಟಿ ಜಿಎಸ್/ನೆಫ್ಟ್, ಇಬಿಎಕ್ಸ್ ಕ್ಯಾಶ್, ಇ-ಸ್ಟ್ಯಾಂಪಿಂಗ್, ಸೇಫ್ ಡೆಪಾಸಿಟ್ ಲಾಕರ್ ಸೌಲಭ್ಯ ಹೊಂದಿದೆ. ಮುಂಬರುವ ದಿನಗಳಲ್ಲಿ ಗ್ರಾಹಕರಿಗೆ ಎಟಿಎಂ, ಮೊಬೈಲ್ ಬ್ಯಾಂಕಿಂಗ್ ಇನ್ನಿತರ ಆಧುನಿಕ ಸೇವೆ ಒದಗಿಸುವುದರೊಂದಿಗೆ ಉತ್ತರ ಕನ್ನಡ ಜಿಲ್ಲೆ ಮತ್ತು ಬೆಂಗಳೂರಿನಲ್ಲಿಯೂ ಶಾಖೆ ಆರಂಬಿಸುವ ಮೂಲಕ ವ್ಯವಹಾರ ವಿಸ್ತರಿಸುವ ಯೋಜನೆ ಕೂಡ ಆಡಳಿತ ಮಂಡಳಿ ಮುಂದಿದೆ.
ಮೀನುಗಾರ ಮಹಿಳಾ ಸ್ವ ಸಹಾಯ ಸಂಘಗಳಿಗೆ 5 ಲಕ್ಷ ರೂ ವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ವಿತರಣೆ, ನವೀಕೃತ ಮಲ್ಪೆ ಶಾಖೆ ಉದ್ಘಾಟನೆ ಅಂಗವಾಗಿ ಜೂ 30ರವರೆಗೆ ಠೇವಣಿಗಳ ಮೇಳೆ ಶೇ. 0 0.25 ಹಚ್ಚುವರಿ ಬಡ್ಡಿಯನ್ನು ನೀಡುವ ಯೋಜನೆ ಹಮ್ಮಿಕೊಂಡಿದೆ. ಮತ್ತು ಗ್ರಾಹಕರಿಗೆ ಎಲ್ಲಾ ರೀತಿಯ ಸಾಲ ಸೌಲಭ್ಯ ಕಡಿಮೆ ಬಡ್ಡಿದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.