ತುಳುನಾಡ ದೈವಾರಾಧಕರ ಒಕ್ಕೂಟದಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಮನವಿ

Spread the love

ತುಳುನಾಡ ದೈವಾರಾಧಕರ ಒಕ್ಕೂಟದಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಮನವಿ

ಉಡುಪಿ: ತುಳುನಾಡ ದೈವಾರಾಧಕರ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲೆ ವತಿಯಿಂದ ಇಂದು ಮಾಜಿ ಉಸ್ತುವರಿ ಸಚಿವರು ಹಾಗೂ ಮಾಜಿ ಶಾಸಕರಾದಂತಹ ಪ್ರಮೋದ್ ಮಧ್ವರಾಜ್ ಅವರಿಗೆ ಅವರ ನಿವಾಸದಲ್ಲಿ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಮನವಿಯನ್ನು ನೀಡಲಾಯಿತು.

ಸರ್ಕಾರ ಮಟ್ಟದಲ್ಲಿ ಇಷ್ಟರತನಕ ಯಾವುದೇ ಕೋರನ ತುತ್ತು ಸಂದರ್ಭದಲ್ಲಿ ಸರ್ಕಾರದಿಂದ ದೈವ ಚಾಕ್ರಿ ವರ್ಗದವರಿಗೆ ಯಾವುದೇ ವಿಶೇಷ ಪ್ಯಾಕೇಜನ್ನು ಬಿಡುಗಡೆ ಮಾಡಲಿಲ್ಲ ಹಾಗೂ ತಕ್ಕಮಟ್ಟಿಗೆ ಕರಾವಳಿ ನಡೆಯುವ 150 ಜನ ಸೀಮಿತಕ್ಕೆ ದೈವಾರಾಧನೆಗೆ ಸರ್ಕಾರದಿಂದ ಅನುಮತಿ ಬರಲಿಲ್ಲ. ಎಷ್ಟೇ ರಾಜಕೀಯ ವ್ಯಕ್ತಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಯವರಿಗೆ ಮನವಿ ಕೊಟ್ಟರು ನಮಗೆ ಸ್ಪಂದನೆ ಸಿಗಲಿಲ್ಲ. ಆದ್ದರಿಂದ ವಿರೋಧ ಪಕ್ಷದ ವತಿಯಿಂದ ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿ ಎಂದು ಮನವಿಯಲ್ಲಿ ಒಕ್ಕೂಟದ ಪರವಾಗಿ ವಿನಂತಿಸಿದ್ದಾರೆ

ಮನವಿಯನ್ನು ಪಡೆದುಕೊಂಡ ಮಾಜಿ ಶಾಸಕರು ಪ್ರಮೋದ್ ಮಧ್ವರಾಜ್ ನಿಮ್ಮೆಲ್ಲಾ ಸಮಸ್ಯೆಯನ್ನು ಈ ದಿನ ಮುಖ್ಯಮಂತ್ರಿ ಹಾಗೂ ಇದಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಮಾತಾಡುತ್ತೇನೆ ನಿಮ್ಮ ಯಾವುದೇ ಸಮಸ್ಯೆಗೆ ನಿಮ್ಮೊಂದಿಗೆ ಬೆಂಬಲವಾಗಿ ನಾನಿರುತ್ತೇನೆ ಎಂದು ಧೈರ್ಯ ತುಂಬಿದರು.

ಈ ಒಂದು ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ ಕೋಶಧಿಕಾರಿ ಶ್ರೀಧರ್ ಪೂಜಾರಿ ಉಪಾಧ್ಯಕ್ಷರಾದ ರವಿ ಶೆಟ್ಟಿ ಯೋಗೀಶ್ ಪೂಜಾರಿ ಕಾಪು ಘಟಕದ ಅಧ್ಯಕ್ಷರಾದ ಯಶೋಧರ್ ಶೆಟ್ಟಿ ಹಾಗೂ ದಯೆಶಾ ಕೊಟ್ಯಾನ ಸುನಿಲ್ ಕುಮಾರ್ ಸಂತೋಷ್ ದೇವಾಡಿಗ ನಿತ್ಯನಂದ ಸೂರ್ಯ ಕಾಂತಾ ದೇವಾಡಿಗ ರಕ್ಷಿತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.


Spread the love