ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರವಾಸ

Spread the love

ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರವಾಸ

ಮಂಗಳೂರು :  ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅ.16ರಂದು ದ.ಕ ಜಿಲ್ಲಾ ಪ್ರವಾಸ ಇಂತಿವೆ.

ಅಕ್ಟೋಬರ್ 17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಗರದ ಡಿಸಿ ಕಚೇರಿಯಲ್ಲಿರುವ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಕುರಿತು ಪೂರ್ವಭಾವಿ ಸಭೆ, ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಬ್ಬಕ್ಕ ಉತ್ಸವ ಮತ್ತು ಜಿಲ್ಲಾ ಸರ್ಕಾರಿ ಪಿಲಿಕುಳ ಕಂಬಳ ಆಯೋಜನೆ ಕುರಿತು ಸಭೆ, ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಗೋಕರ್ಣಾಥೇಶ್ವ್ವರ ಕಾಲೇಜು ಮತ್ತು ಇ.ಎಸ್.ಐ ಅಧಿಕಾರಿಗಳೊಂದಿಗೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್ ಜಾಗ ಕಾಯ್ದಿರಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ರಾತ್ರಿ 7 ಗಂಟೆಗೆ ಮಂಗಳೂರಿನಿಂದ ಕೋಟಕ್ಕೆ ತೆರಳಲಿದ್ದಾರೆ.


Spread the love