ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ
ಮಂಗಳೂರು: ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರ 129ನೇ ಜನ್ಮ ಜಯಂತಿಯ ಕಾರ್ಯಕ್ರಮವು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರ ನಿರ್ದೇಶನದಂತೆ ಸಂವಿಧಾನದ ಪೂರ್ವ ಪೀಠಿಕೆಯನ್ನು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಓದಿಸುವ ಮೂಲಕ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಕೆಪಿಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಮಂಗಳೂರು ಮನಪಾ ಪ್ರತಿಪಕ್ಷ ನಾಯಕ ಅಬ್ದುರ್ರವೂಫ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ನ ಕೋಶಾಧಿಕಾರಿ ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ವಂದಿಸಿದರು.