ದಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

Spread the love

ದಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ನೀಡಲಾಗುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿಯನ್ನು ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡಿ ಗೌರವಿಸಿಕೊಂಡು ಬರುವ ಪದ್ದತಿ ಜಿಲ್ಲಾಡಳಿತದಿಂದ ಇರುತ್ತದೆ.

ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅರ್ಜಿಯನ್ನು ತಮ್ಮ ಸೇವೆ, ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ ವಿವರಣೆಗಳೊಂದಿಗೆ ಅಕ್ಟೋಬರ್ 25ರ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love