ದಕ್ಷಿಣ ಕನ್ನಡ ಜಿಲ್ಲೆ ಮತಎಣಿಕೆ ಸಂಬಂಧ ವಿಜಯೋತ್ಸವ, ಮೆರವಣಿಗೆ ನಿಷೇಧಾಜ್ಞೆ

Spread the love

ದಕ್ಷಿಣ ಕನ್ನಡ ಜಿಲ್ಲೆ ಮತಎಣಿಕೆ ಸಂಬಂಧ ವಿಜಯೋತ್ಸವ, ಮೆರವಣಿಗೆ ನಿಷೇಧಾಜ್ಞೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆ, ಬಂಟ್ವಾಳ ಪುರಸಭೆ ಮತ್ತು ಪುತ್ತೂರು ನಗರಸಬೆ ವ್ಯಾಪ್ತಿಯಲ್ಲಿ ಸೆಪ್ಟಂಬರ್ 3 ರಂದು ಪೂರ್ವಾಹ್ನ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35 ರನ್ವಯ ನಿರ್ಬಂಧಕಾಜ್ಞೆಯನ್ನು ವಿಧಿಸಿ ಅದೇಶಿಸಿಸಿದ್ದಾರೆ.

ಈ ಅವಧಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು, ಪ್ರತಿಭಟನೆ, ಜಾಥಾ-ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕ್ರತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ.
ಸಭ್ಯತೆ

ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯಸ್ಥೆಗೆ ಭಾದೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೊಷಣೆಗಳನ್ನು ಮಾಡುವುದು, ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅತವ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು ಅಥವಾ ಪದರ್ಥವನ್ನು ತಯಾರಿಸುವುದು, ಪ್ರದಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.


Spread the love