ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಯ ಬಂಧನ

Spread the love

ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಯ ಬಂಧನ

ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವರದಿಯಾದ ದ್ವಿ ಚಕ್ರ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಎರಡು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತನ್ನನ್ನು ಕಾಸರಗೋಡು ಕುಂಬ್ಳೆ ನಿವಾಸಿ ರವೀಂದ್ರ @ರವಿ@ ಡಬ್ಬಿ (25) ಎಂದು ಗುರುತಿಸಲಾಗಿದೆ
ದಿನಾಂಕ 07-10-2018 ರಂದು ಮದ್ಯಾಹ್ನ 15-35 ಗಂಟೆಯಿಂದ 19-30 ಗಂಟೆಯ ನಡುವೆ

ಪಿರ್ಯಾದಿದಾರರಾದ ಪ್ರಮೋದ್ ರವರು ಮಂಗಳೂರು ನಗರದ ಅತ್ತಾವರದ ಉಮಾಮಹೇಶ್ವರ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ದಿ ಕರಾವಳಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಹಿಂಬದಿ ಪಾರ್ಕ್ ಮಾಡಿದ್ದ ಹೀರೋಹೋಂಡಾ ಪ್ಯಾಶನ್ ಪ್ರೋ ಕೆಎ-19-ಇಕೆ-3366ನೇ ಮೋಟಾರ್ ಸೈಕಲನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಈತನ ಮೇಲೆ ಕಾಸರ್ ಗೋಡ್ ಜಿಲ್ಲೆಯ ಕುಂಬ್ಳೆ ಪೊಲೀಸ್ ಠಾಣೆಯಲ್ಲಿ 1 ದ್ವಿ ಚಕ್ರ ವಾಹನ ಕಳವು ಪ್ರಕರಣ ಹಾಗೂ ಪೋಕ್ಸೋ ಕಾಯ್ದೆ ಯಡಿಯಲ್ಲಿ 01 ಪ್ರಕರಣ ದಾಖಲಾಗಿದ್ದು ಸದ್ರಿ ಪ್ರಕರಣವು ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ.

ಈ ಪ್ರಕರಣದ ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪ ನಿರೀಕ್ಷಕರಾದ ಮಂಜುಳಾ.ಎಲ್ ರವರು ಆರೋಪಿಯನ್ನು ದಸ್ತಗಿರಿ ಮಾಡಿ ಠಾಣೆಯಲ್ಲಿ ದಾಖಲಾದ ಎರಡು ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 75,000/-ರೂ ಮೌಲ್ಯದ ಎರಡು ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಯಿತು.

ಪೊಲೀಸ್ ಆಯುಕ್ತರಾದ ಟಿ.ಆರ್ ಸುರೇಶ್ ,ಐಪಿಎಸ್., ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಹನುಮಂತರಾಯ, ಉಪ-ಪೊಲೀಸ್ ಆಯುಕ್ತರಾದ (ಅಪರಾಧ ಮತ್ತು ಸಂಚಾರ ) ಉಮಾಪ್ರಶಾಂತ್, ಹಾಗೂ ಮಂಗಳೂರು ಸೆಂಟ್ರಲ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಭಾಸ್ಕರ್ ವಿ.ಬಿ ಇವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ರವರ ನಿದೇರ್ಶನದಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪನಿರೀಕ್ಷಕರಾದ ಮಂಜುಳಾ.ಎಲ್ ರವರು ಮಂಗಳೂರು ದಕ್ಷಿಣ ಠಾಣೆಯ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯವರ ಸಹಾಯದಿಂದ ಆರೋಪಿಯನ್ನು ದಸ್ತಗಿರಿ ಮಾಡಿ ಆರೋಪಿಯು ಕಳವು ಮಾಡಿದ 2 ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಂಡಿರುತ್ತಾರೆ.


Spread the love