Spread the love
ದ್ವಿತೀಯ ಪಿಯುಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ : ಯಶ್ಪಾಲ್ ಸುವರ್ಣ ಅಭಿನಂದನೆ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 93.90 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟವನ್ನು ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಸಾಬೀತು ಮಾಡಿದೆ.
ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
Spread the love