ದ್ವೇಷ ಭಾಷಣ ಆರೋಪ: ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಪ್ರಕರಣ ದಾಖಲು

Spread the love

ದ್ವೇಷ ಭಾಷಣ ಆರೋಪ: ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಧರ್ಮಗಳ ಮಧ್ಯೆ ದ್ವೇಷಕಾರುವ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಉಪನ್ಯಾಸಕ ಡಾ. ಅರುಣ್ ಉಳ್ಳಾಲ್ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಈತ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವಂತಹ ಭಾಷಣ ಮಾಡಿದ್ದಾನೆ ಎಂಬ ಆರೋಪ ಈತನ ಮೇಲೆ ಕೇಳಿ ಬಂದಿತ್ತು. ಅಲ್ಲದೆ ಈತನ ಭಾಷಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪೊಲೀಸ್ ಇಲಾಖೆಯು ಕಾನೂನು ಕ್ರಮಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿ ಬಂದಿತ್ತು. ಈ ಬಗ್ಗೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡಿದೆ.

ಭಾಷಣದಲ್ಲಿ ಹೇಳಿದ್ದೇನು?
ಭಾಷಣ ಮಾಡುತ್ತಾ ‘ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಅವರು ಹೇಳಿದ್ದರು.

ಈ ಹಿನ್ನಲೆ ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ದ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments