ನೇಜಾರು ಹತ್ಯಾಕಾಂಡ: ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Spread the love

ನೇಜಾರು ಹತ್ಯಾಕಾಂಡ: ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಉಡುಪಿ: ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.

ಮಲ್ಪೆ ಠಾಣೆಯ ನೇಜಾರು ಎಂಬಲ್ಲಿ ಒಂದೇ ಕುಟುಂಬದವರಾದ ಐನಾಜ್, ಹಸೀನಾ, ಅಫ್ನಾನ್ ಹಾಗೂ ಅಸೀಮ್ ಎಂಬುವರರನ್ನು ಆರೋಪಿ ಪ್ರವೀಣ್ ಅರುಣ್ ಚೌಗುಲೆ ಹತ್ಯೆ ನಡೆಸಿದ್ದ. ಈ ಕುರಿತು ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯ, ಆರೋಪಿ ಕೂದಲಿನ DNA ಆಧರಿಸಿ ಹೆಚ್ಚುವರಿ ಎಸ್ಪಿಪಿ ಬಿ.ಎನ್.ಜಗದೀಶ್ ಅವರು ಇಂದು(ಗುರುವಾರ) ವಾದ ಮಂಡಿಸಿದ್ದರು. ಅದರಂತೆ ಬರ್ಬರ ಹತ್ಯೆ ಆರೋಪಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.


Spread the love