ನ್ಯಾಷನಲ್ ಕಾಂಗ್ರೆಸ್ ವಿದ್ಯಾರ್ಥಿ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಎಲ್ ಸ್ಟನ್ ನೊರೊನ್ಹಾ ನೇಮಕ
ಉಡುಪಿ: ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್ ಇದರ ಉಡುಪಿ ಜಿಲ್ಲಾ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ಎಲ್ ಸ್ಟನ್ ನೊರೊನ್ಹಾ ಮೂಡುಬೆಳ್ಳೆ ಇವರನ್ನು ನೇಮಕಗೊಳಿಸಲಾಗಿದೆ.
ಉಡುಪಿ ಜಿಲ್ಲಾ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ಎಲ್ ಸ್ಟಾನ್ ನೊರೊನ ಮೂಡುಬೆಳ್ಳೆ ಇವರನ್ನು ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ರಂಜಿತ್ ಮತ್ತು ಮತ್ತು ದಕ್ಷಿಣ ಭಾರತದ ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್ ನ ಉಸ್ತುವಾರಿಯಾಗಿರುವ ಎಂಡಿ ಫಾರೂಕ್ ಇವರ ಅನುಮತಿ ಮೇರೆಗೆ ನ್ಯಾಷನಲ್ ಕಾಂಗ್ರೆಸ್ ಬ್ರಿಗೇಡ್ ಉಡುಪಿ ಜಿಲ್ಲಾಧ್ಯಕ್ಷ ಸ್ಟೀವನ್ ಕುಲಾಸೊ ನೇಮಕ ಮಾಡಿದ್ದಾರೆ.
ಎಲ್ ಸ್ಟನ್ ನೊರೊನ್ಹಾ ಮೂಡುಬೆಳ್ಳೆ ಅವರು ಪ್ರಸ್ತುತ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದು, ಮೂಡುಬೆಳ್ಳೆ ಸಂತ ಲಾರೆನ್ಸ್ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅಂತರಾಷ್ಟ್ರೀಯ ಮಟ್ಟದ ಸಂಘಟನೆಯಾದ ವೈಸಿಎಸ್ ಇದರ ಮೂಡುಬೆಳ್ಳೆ ಚರ್ಚ್ ಘಟಕದ ಅಧ್ಯಕ್ಷರಾಗಿಯೂ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ವಿದ್ಯಾರ್ಥಿ ಸಂಘಟನೆ ಮುಂದಿನ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಸಂಘಟನೆಯಲ್ಲಿ ನಿರತರಾಗಿದ್ದು ‘ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಬ್ರಿಗೇಡ್ ಕಾರ್ಯನಿರ್ವಹಿಸಲಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ನಾಲ್ಕು ವರ್ಷಗಳ ಸಾಧನೆಗಳನ್ನು ಜನರಿಗೆ ತಿಳಿಸುವುದು ಇದರ ಉದ್ದೇಶವಾಗಿದೆ.