ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರ ಬಂಧನ
ಮಂಗಳೂರು: ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪಣಂಬೂರು ಪೊಲೀಸರು ಇಬ್ಬರನ್ನು ಶುಕ್ರವಾರ ಬಂಧಿಸಿದ್ದಾರೆ.
ದಿನಾಂಕ 19/20-12-2018 ರಂದು ರಾತ್ರಿ ಗಸ್ತು ಕರ್ತವ್ಯದಲ್ಲಿ ಪಣಂಬೂರು ಠಾಣಾ ಸಿಬ್ಬಂದಿಯವರು ಇದ್ದು ರಾತ್ರಿ 2-30 ಗಂಟೆಗೆ ತೋಟಬೆಂಗ್ರೆಯ ಸರಕಾರಿ ಶಾಲೆಯ ಬಳಿ ತಲುಪುತ್ತಿದ್ದಂತೆ ಅಲ್ಲಿ ಇದ್ದ 4 ಜನ ಆರೋಪಿಗಳಾದ 1) ವಿಜೀತ್ 2) ರಮೀತ್ 3) ಶ್ರಾವಣ್ 4) ಆಕಾಶ್ ಎಂಬವರು ಬೀಟು ಸಿಬ್ಬಂದಿಯವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆಯೊಡ್ಡಿ ಸಮವಸ್ತ್ರದಲ್ಲಿ ಸರಕಾರಿ ಕರ್ತವ್ಯದಲ್ಲಿರುವ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದವರಾಗಿರುತ್ತಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರಿಸಿ ಇಬ್ಬರು ಆರೋಪಿಗಳಾದ 1) ವಿಜೀತ್ ಅಲಿಯಾಸ್ ಶಿವರಾಜ್ ಕುಮಾರ್ 2) ಶ್ರಾವಣ್ ಅಲಿಯಾಸ್ ಚಾನು ರವರನ್ನು ಪಿ.ಎಸ್.ಐ ಉಮೇಶ್ ಕುಮಾರ್ ಎಮ್.ಎನ್ ಮತ್ತು ಮಂಗಳೂರು ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಈ ದಿನ ದಿನಾಂಕ 21-12-2018 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದಲ್ಲಿ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ. ದಸ್ತಗಿರಿಯಾದ ವಿಜೀತ್ ಅಲಿಯಾಸ್ ಶಿವರಾಜ್ ಕುಮಾರ್ ಈತನ ಮೇಲೆ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ ಹಾಳೆಯನ್ನು ತೆರೆಯಲಾಗಿದ್ದು ಈತನ ಮೇಲೆ ಪಣಂಬೂರು ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿರುತ್ತದೆ. ಹಾಗೂ ಶ್ರಾವಣ್ ಅಲಿಯಾಸ್ ಚಾನು ಈತನ ಮೇಲೆ ಉಳ್ಳಾಲ ಠಾಣೆಯಲ್ಲಿ ರೌಡಿಹಾಳೆಯನ್ನು ತೆರೆಯಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈಗಾಗಲೇ 5 ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಎಂ.ಮಂಜುನಾಥ ಶೆಟ್ಟಿ ಇವರ ಮಾರ್ಗದರ್ಶನದಂತೆ ಪಣಂಬೂರು ಠಾಣಾ ಪಿ.ಎಸ್.ಐ(ಕಾ.ಸು) ಉಮೇಶ್ ಕುಮಾರ್.ಎಂ.ಎನ್ ಹಾಗೂ ಮಂಗಳೂರು ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳದ ಸಿಬ್ಬಂದಿಗಳು ಶ್ರಮಿಸಿರುತ್ತಾರೆ.