ಪೋಲಿಸರಿಗೆ ಬೆದರಿಗಕೆ; ಸಂಸದ ನಳಿನ್ ಕುಮಾರ್ ವಿರುದ್ದ ಪ್ರಕರಣ ದಾಖಲು
ಮಂಗಳೂರು: ಪೋಲಿಸರ ಕರ್ತವ್ಯಕ್ಕೆ ವೃದ್ದಿಪಡಿಸಿದ್ದಲ್ಲದೆ ಅವರನ್ನು ಏಕವಚನದಲ್ಲಿ ಬೆದರಿಕೆ ಹಾಕಿದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮೇಲೆ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಮಂಗಳೂರು ಚಲೋ ರ್ಯಾಲಿ ಸಂದರ್ಭ ಬಂಧಿಸಲ್ಪಟ್ಟ ಬಿಜೆಪಿ ಕಾರ್ಯಕರ್ತರ ಬಿಡುಗಡೆ ವಿಚಾರದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎನ್ನುವ ಆರೋಪದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮಧ್ಯಾಹ್ನ ರ್ಯಾಲಿ ನಡೆದ ಬಳಿಕ ಕಾರ್ಯಕರ್ತರಲ್ಲಿ ಕೆಲವರನ್ನು ಬಂದಿಸಿ ಕದ್ರಿಯ ಗೋರಕ್ಷನಾಥ ಸಭಾಂಗಣಕ್ಕೆ ಕರೆತಂದು ನಿಯಮಾವಳಿಯಂತೆ ಎಲ್ಲರ ಸಹಿ ತೆಗೆದುಕೊಳ್ಳಲಾಗಿತ್ತು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್ ಕದ್ರಿ ಇನ್ಸ್ಪೆಕ್ಟರ್ ಮಾರುತಿ ನಾಯಕ್ ಜತೆ ಒರಟಾಗಿ ವರ್ತಿಸಿದ್ದಲ್ಲದೆ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಬಂದಿಗೆ ಕರೆ ನೀಡುವುದಾಗಿ ಬೆದರಿಕೆ ಹಾಕಿದ್ದರು.
ಈ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭಿರವಾಗಿ ಪರಿಗಣಿಸಿದ ಪೋಲಿಸರು ಸಂಸದ ನಳಿನ್ ವಿರುದ್ದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.