ಪೌರತ್ವ ಮಸೂದೆ; ಮಂಗಳೂರು ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಡಿ.20 ರಂದು ರಜೆ ಘೋಷಣೆ
ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದಿರುವ ಪರಿಣಾಮ ಡಿಸೆಂಬರ್ 20 ರಂದು ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ ರೂಪೇಶ್ ಆದೇಶಿಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದು, ಗಲಾಟೆ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮಂಗಳೂರು ಉತ್ತರ, ದಕ್ಷಿಣ, ಪೂರ್ವ, ಬರ್ಕೆ ಮತ್ತು ಉರ್ವ ಠಾಣೆ ವ್ಯಾಪ್ತಿಯಲ್ಲಿ 20 ರಂದು ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ ರೂಪೇಶ್ ಆದೇಶಿಸಿದ್ದಾರೆ