ಪ್ರತಿಭಟನೆ ಮಾಡಿದವರ ಮೇಲೆ ಎಫ್ ಐ ಆರ್ ದಾಖಲೆ, ಸರ್ಕಾರದ ನಡೆ ಖಂಡನೀಯ – ಸುನೀಲ್ ಕುಮಾರ್

Spread the love

ಪ್ರತಿಭಟನೆ ಮಾಡಿದವರ ಮೇಲೆ ಎಫ್ ಐ ಆರ್ ದಾಖಲೆ, ಸರ್ಕಾರದ ನಡೆ ಖಂಡನೀಯ – ಸುನೀಲ್ ಕುಮಾರ್

ಕಾರ್ಕಳ: ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಹನ್ನೊಂದು ಜನರ ಮೇಲೆ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕೃತ್ಯ ಎಂದು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದುವರೆಗೆ ಆಡಿದ ಮಾತುಗಳೆಲ್ಲವೂ ಕೇವಲ ತೋರಿಕೆ. ಈ ಎಲ್ಲ ಮಾತುಗಳು ಪ್ರತಿಪಕ್ಷದಲ್ಲಿ ಇದ್ದಾಗ ಮಾತ್ರ ಅವರಿಗೆ ಸುಲಭವಾಗಿ ಲಭಿಸುವ ಭಾಷಣದ ಸರಕ್ಕೆಂಬುದು ಈಗ ದೃಢಪಟ್ಟಿದೆ. ಅಧಿಕಾರದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಒಂದು ಪ್ರತಿಭಟನೆಯನ್ನೂ ಸಹಿಸಲಾಗದಂಥ ನಿರಂಕುಶ ಮನಃಸ್ಥಿತಿ ಆವರಿಸುತ್ತದೆ ಎಂಬುದಕ್ಕೆ ಈ ಘಟನೆಯೊಂದು ಉದಾಹರಣೆಯಾಗಿದೆ.

ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ಸರ್ಕಾರ ವಾಪಾಸ್ ತೆಗೆದುಕೊಂಡಿತ್ತು.ಇದರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದರಲ್ಲಿ ಭಾಗಿಯಾದ ಹನ್ನೊಂದು ಜನರ ಮೇಲೆ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚಿಸಿದೆ.ನಿಮ್ಮ ಸರ್ಕಾರ ಪ್ರತಿಭಟನೆ ನಡೆಸುವುದನ್ನೂ ಸಹಿಸದಷ್ಟು ಪ್ರಜಾಪ್ರಭುತ್ವ ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ವಿಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿದ್ದ ದ್ವೇಷರಾಜಕಾರಣ ನಡೆಸಲಾಗುತ್ತಿತ್ತು. ಅದು ಈಗ ಮತ್ತೊಂದು ಮಜಲು ತಲುಪಿದೆ. ಈಗ ಹೋರಾಟಗಾರರನ್ನೂ ದಮನಿಸುವುದಕ್ಕೆ ಈ ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತವಲ್ಲ. ದೌರ್ಜನ್ಯಕ್ಕೆ ಜನ ಬೆದರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ಸಾಕ್ಷಿ ನಾಶ ಸುಲಭವಲ್ಲ ಎಂಬುದು ನೆನಪಿರಲಿ.


Spread the love
Subscribe
Notify of

0 Comments
Inline Feedbacks
View all comments