ಪ್ರತಿಭಟನೆಗೆ ಸಜ್ಜಾಗಿದ್ದ ಪಿ.ಎಫ್.ಐ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಿದ ಉಳ್ಳಾಲ ಪೊಲೀಸರು
ಉಳ್ಳಾಲ: ಸಾಮಾಜಿಕ ತಾಣಗಳಲ್ಲಿ ಕೋಮು ದ್ವೇಷ ಬಿತ್ತುವ ಸಂದೇಶ ರವಾನಿಸಿದ ಆರೋಪದ ಮೇಲೆ ಉಳ್ಳಾಲ ನಿವಾಸಿಯಾದ ಝಾಕೀರ್ ಎಂಬಾ ತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ಪ್ರತಿಭಟನೆಗೆ ಪ್ರಯತ್ನಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಕಾರ್ಯಕರ್ತರನ್ನು ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದೆ ಹಿಮ್ಮೆಟ್ಟಿಸಿದ ಘಟನೆ ಸೋಮವಾರ ಉಳ್ಳಾಲದಲ್ಲಿ ಜರುಗಿತು.
ಉಳ್ಳಾಲ ನಿವಾಸಿಯಾದ ಝಾಕೀರ್ ಸಾಮಾಜಿಕ ಜಾಲತಾಣವಾದ ವ್ಯಾಟ್ಸ್ಆ್ಯಪ್ನಲ್ಲಿ ಕೋಮುದ್ವೇಷ ಬಿತ್ತುವ ಸಂದೇಶ ರವಾನಿಸುತ್ತಿದ್ದ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಠಾಣೆಗೆ ಕರೆಸಿ ವಿಚಾ ರಣೆ ನಡೆಸಿದ್ದಾರೆ. ಈ ವೇಳೆ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲಿಸಿದಾಗ, ಕೋಮು ದ್ವೇಷ ಬಿತ್ತುವ ಸಂದೇಶಗಳನ್ನು ಕಳುಹಿಸಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿತ್ತು.
ಇದನ್ನು ವಿರೋಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಕಾರ್ಯಕರ್ತರು ಝಾಕೀರ್ ನನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಪ್ರಯತ್ನಿಸಿದ್ದರು. ಆದರೆ ಪೊಲೀಸರು ಪ್ರತಿಭಟನೆ ನಡೆಸಲು ಅವಕಾಶ ನೀಡದೆ ಕಾರ್ಯಕರ್ತರನ್ನು ಸ್ಥಳದಿಂದ ಹಿಮ್ಮೆಟ್ಟಿಸಿದರು.
ಈ ವೇಳೆ ಉಳ್ಳಾಲ ಪೊಲೀಸ್ ಠಾಣೆಯ ಬಳಿ ಭಾರಿ ಪೊಲೀಸ್ ಬಂದೊಬಸ್ತನ್ನು ಮಾಡಲಾಗಿತ್ತು.
ಸಾಮಾಜಿಕ ತಾಣಗಳಲ್ಲಿ ಕೋಮು ದ್ಷೇಷ ಬಿತ್ತುವ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ಬಗ್ಗೆ ನಿದ್ಯಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ’ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಎಚ್ಚರಿಕೆ ನೀಡಿದ್ದಾರೆ