ಬಂಟ್ವಾಳ : ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರಿನ ವ್ಯಕ್ತಿಯ ರಕ್ಷಣೆ

Spread the love

ಬಂಟ್ವಾಳ : ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರಿನ ವ್ಯಕ್ತಿಯ ರಕ್ಷಣೆ

ಬಂಟ್ವಾಳ : ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕ್ಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಈ ಸಂದರ್ಭ ಸ್ಥಳೀಯರಾದ ಸತ್ಯ ಯಾನೆ ಸತೀಶ್ ಹಾಗೂ ಸಿದ್ಧೀಕ್ ಎಂ.ಕೆ.ರೋಡ್ ನದಿಯಲ್ಲಿ ಟ್ಯೂಬ್ ಮೂಲಕ ಕಾರ್ಯಾಚರಣೆ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ ಶಂಕರಯ್ಯ ಸುರಕ್ಷಿತವಾಗಿ ದಡಕ್ಕೆ ಕರೆತಂದರು.

ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments