ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತ್ಯು

Spread the love

ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತ್ಯು

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು, ಮಳೆಯೊಂದಿಗೆ ಕಾಣಿಸಿಕೊಂಡ ಸಿಡಿಲಿಗೆ ದ.ಕ. ಜಿಲ್ಲೆಯಲ್ಲಿ ಓರ್ವ ಬಾಲಕ ಬಲಿಯಾಗಿರುವ ಘಟನೆ ವರದಿಯಾಗಿದೆ.

ಕೆದಿಲ ಗ್ರಾಮದ ಗಡಿಯಾರದ ಚಂದ್ರಹಾಸ ಎಂಬವರ ಪುತ್ರ ಸುಭೋದ್ (14) ಸಿಡಿಲು ಬಡಿದು ಮೃತಪಟ್ಟ ಬಾಲಕ

ಸಂಜೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಮಳೆ ಕಾಣಿಸಿಕೊಂಡಿತು. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಸಂಜೆ 5 ಗಂಟೆಯ ಹೊತ್ತಿಗೆ ಮನೆಯ ಅಂಗಳದಲ್ಲಿ ನಿಂತಿದ್ದ ಬಾಲಕ ಸುಭೋದ್ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಕೆಲವು ದಿನಗಳಿಂದ ಸಂಜೆ ವೇಳೆ ಕಾಣಿಸಿಕೊಳ್ಳುತ್ತಿರುವ ಭಾರೀ ಮಳೆ ಸೋಮವಾರವು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.


Spread the love