ಬಂಟ್ಸ್ ಹಾಸ್ಟೆಲ್: ಶ್ರೀ ಗಣೇಶೋತ್ಸವ ಉದ್ಘಾಟನೆ

Spread the love

ಬಂಟ್ಸ್ ಹಾಸ್ಟೆಲ್: ಶ್ರೀ ಗಣೇಶೋತ್ಸವ ಉದ್ಘಾಟನೆ

ಬಂಟ್ಸ್ ಹಾಸ್ಟೆಲ್‍ನಲ್ಲಿ ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣ ವಾಗಿ ಆಚರಿಸುತ್ತಿರುವ ಗಣೇಶೋತ್ಸ ವವು ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸ್ತುತ್ಯರ್ಹವಾಗಿದೆ ಎಂದು ಹಿರಿಯ ಇಂಜಿನಿಯರ್ ಬಿ.ಪದ್ಮನಾಭ ರೈ ಅವರು ಹೇಳಿದರು. ಶ್ರೀ ಸಿದ್ಧಿವಿನಾ ಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್‍ನಲ್ಲಿ ನಡೆಯುತ್ತಿರುವ ಸಾರ್ವ ಜನಿಕ ಶ್ರೀ ಗಣೇಶೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧ್ವಜಾರೋಹಣ ನೆರವೇರಿಸಿದ ಕ್ಯಾ|ದೀಪಕ್ ಅಡ್ಯಂತಾಯ ಅವರು ಮಾತನಾಡಿ, ವರ್ಷಂಪ್ರತಿ ನಿವೃತ್ತ ಸೈನ್ಯಾಧಿಕಾರಿಗಳನ್ನು ಆಮಂತ್ರಿಸಿ, ಧ್ವಜಾರೋಹಣ ನಡೆಸುವ ಇಲ್ಲಿನ ವಿಶಿಷ್ಟ ಸಂಪ್ರದಾಯ ಸರ್ವ ಸಂಘ ಟಕರಿಗೆ ಮಾದರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ತೆನೆ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು.

ಪ್ರತಿಭಾ ಪಿ.ರೈ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರವಿರಾಜ ಶೆಟ್ಟಿ ನಿಟ್ಟೆಗುತ್ತು, ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಡಾ|ಆಶಾ ಜ್ಯೋತಿ ರೈ, ಬಂಟರ ಮಾತೃ ಸಂಘದ ಕಾರ್ಯದರ್ಶಿ ವಸಂತ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಅಜಿತ್ ಕುಮಾರ್‍ರೈ ಮಾಲಾಡಿ ಪ್ರಸ್ತಾವನೆಗೈದು, ಸ್ವಾಗತಿಸಿ ದರು. ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿ ಉಮೇಶ್‍ರೈ ವಂದಿಸಿ ದರು. ಸಾಂಸ್ಕೃತಿಕ ಸಮಿತಿಯ ಸತೀಶ್ ಶೆಟ್ಟಿ ಕೊಡಿಯಾಲ್‍ಬೈಲ್ ಹಾಗೂ ಜೊತೆ ಕಾರ್ಯದರ್ಶಿ ಶರತ್ ಶೆಟ್ಟಿ ಪಡು ಕಾರ್ಯಕ್ರಮ ನಿರೂಪಿಸಿದರು.


Spread the love