ಬಂಟ್ಸ್ ಹಾಸ್ಟೆಲ್ ಶ್ರೀಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು: ಬಂಟ್ಸ್ ಹಾಸ್ಟೆಲ್ ಓಂಕಾರನಗರ ಸಿದ್ದಿವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ ಸೆ.5ರಿಂದ7ರವರೆಗೆ ನಡೆಯುವ 13ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಶುಕ್ರವಾರ ಬಂಟ್ಸ್ ಹಾಸ್ಟೆಲ್ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ಜರಗಿತು.
ಗೋಲ್ಡ್ಪಿಂಚ್ ಹೊಟೇಲ್ನ ಮೇಲ್ವಿಚಾರಕ ಪ್ರಸಾದ್ ಕುಮಾರ್ ಶೆಟ್ಟಿ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಬ್ರಿಗೇಡಿಯರ್ ಐ.ಎನ್.ರೈ ಅವರು ಗಣಯಾಗದ ಪುಸ್ತಕವನ್ನು ಸಭೆಯಲ್ಲಿ ಬಿಡುಗಡೆ ಮಾಡಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ಕುಮಾರ್ ರೈ ಮಾಲಾಡಿ ಮಾತನಾಡಿ 13ನೇ ವರ್ಷದ ಶ್ರೀಗಣೇಶೋತ್ಸವ ಸಮಾರಂಭದಲ್ಲಿ ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ ಜರಗಲಿದೆ. ಸಮಾರಂಭದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ ಎಂದರು.
ಸಮಾರಂಭದಲ್ಲಿ ಟ್ರಸ್ಟಿಗಳಾದ ಶೆಡ್ಡೆಮಂಜುನಾಥ ಭಂಡಾರಿ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಕೃಷ್ಣಪ್ರಸಾದ್ ರೈ ಬೆಳ್ಳಿಪ್ಪಾಡಿ, ಕೆ.ಬಾಲಕೃಷ್ಣ ಶೆಟ್ಟಿ ಬೆಳ್ಳಿಬೆಟ್ಟುಗುತ್ತು, ಪ್ರತಿಭಾನ್ವೇಷಣೆ ಸಮಿತಿಯ ಸಂಚಾಲಕಿ ಡಾ.ಆಶಾ ಜ್ಯೋತಿ ರೈ, ವಿಧಾನ ಪರಿಷತ್ನ ಮಾಜಿ ಸದಸ್ಯ ಕೆ.ಮೋನಪ್ಪ ಭಂಡಾರಿ, ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಜಯರಾಮ ಸಾಂತ, ಸಹ ಸಂಚಾಲಕ ಉಮೇಶ್ ರೈ ಪದವು ಮೇಗಿನ ಮನೆ, ಸಿಎ ಮನಮೋಹನ್ ಶೆಟ್ಟಿ, ಜಯರಾಜ ಶೆಟ್ಟಿ , ಸುಂದರ ಶೆಟ್ಟಿ ಹಾಗೂ ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಸ್ವಾಗತಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ಚೇಳಾೈರ್ ಗುತ್ತು ಸಮಿತಿಗಳ ವಿವರ ನೀಡಿದರು. ಸೇವಾ ವಿವರಗಳ ಮಾಹಿತಿಯನ್ನು ಅಶÀ್ವಥಾಮ ಹೆಗ್ಡೆ ನೀಡಿದರು. ಕೃಷ್ಣರಾಜ ಸುಲಯ ವಂದಿಸಿದರು. ಬಿ.ಶೇಖರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ದ.ಕ.ಉಡುಪಿ, ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಕಾರದಲ್ಲಿ ಸೆ.5ರಿಂದ 7ರವರೆಗೆ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಾರಂಭ ಜರಗಲಿದೆ.