ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಇಬ್ಬರು ಮಹಿಳಾ ಪಿಂಪ್ ಗಳ ಸೆರೆ

Spread the love

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಇಬ್ಬರು ಮಹಿಳಾ ಪಿಂಪ್ ಗಳ ಸೆರೆ

ಮಂಗಳೂರು: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಇಬ್ಬರು ಮಹಿಳಾ ಪಿಂಪ್ ಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಆಗಸ್ಟ್ 26 ರಂದು ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ದ್ವಾರದ ಬಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಮಂಜೇಶ್ವರ ಕಾಸರಗೋಡು ನಿವಾಸಿ ಅರುಂದತಿ (38) ಮತ್ತು ಜೆಪ್ಪಿನಮೊಗರು ನಿವಾಸಿ ಸರಸ್ವಿತಿ (37) ಎಂಬರವನ್ನು ಬಂಧಿಸಿದ್ದು, ರಂಜಿತಾ ಮತ್ತು ದಿಲ್ ರಾಜ್ ಎಂಬವರು ತಲೆಮರೆಸಿಕೊಂಡಿದ್ದಾರೆ.

ಇಬ್ಬರು ಮಹಿಳಾ ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ 2 ಮೊಬೈಲ್ ಫೋನ್ ಗಳನ್ನು ಹಾಗೂ ನಗದು ಹಣ ರೂ. 20,800/- ನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳಾ ಪಿಂಪ್ ಗಳು ಈ ಮನೆಯನ್ನು ಬಾಡಿಗೆಗೆ ಪಡೆದು ಯುವತಿಯರನ್ನು ಈ ಮನೆಯಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದರು. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಓರ್ವ ನೊಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳಾ ಪಿಂಪ್ ಗಳನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಅಲ್ಲದೇ ಯುವತಿಯನ್ನು ವೇಶ್ಯಾವಾಟಿಕೆಗೆ ಬೆಂಗಳೂರಿನಿಂದ ಕರೆತಂದ ಆರೋಪಿ ರಂಜಿತಾ ಹಾಗೂ ವೇಶ್ಯಾವಾಟಿಕೆ ದಂಧೆಗೆ ಮನೆಯನ್ನು ಬಾಡಿಗೆಗೆ ನೀಡಿದ ಮನೆಯ ಮಾಲೀಕರಾದ ದಿಲ್ ರಾಜ್ ಎಂಬವರು ತಲೆಮರೆಸಿಕೊಂಡಿದ್ದು, ಅವರ ವಿರುದ್ದ ಕೂಡಾ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಆಯುಕ್ತರಾದ ಡಾ: ಪಿ.ಎಸ್ ಹರ್ಷ, ಐ.ಪಿ.ಎಸ್, ಪೊಲೀಸ್ ಉಪ ಆಯುಕ್ತರವರಾದ ಆರುಣಾಂಶು ಗಿರಿ, (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಶ್ರೀ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್ ಸಿಸಿಬಿ ಪಿಎಸ್ಐ ಕಬ್ಬಾಳ್ ರಾಜ್ ಹೆಚ್ ಡಿ, ಹಾಗೂ ಸಿಸಿಬಿ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love