ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ – ಹರೀಶ್ ಕುಮಾರ್

Spread the love

ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ – ಹರೀಶ್ ಕುಮಾರ್

ಮಂಗಳೂರು: “ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದ್ದು, ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿಲ್ಲ. ಈ ಹಿಂದಿನ ಯುಪಿಎ ನೇತೃತ್ವದ ಮನಮೋಹನ್ ಸಿಂಗ್ ಅವರ ಸರಕಾರ ಮಂಡಿಸಿರುವ ಎಲ್ಲ ಬಜೆಟ್ ಗಳು ರಾಜಕೀಯ ಉದ್ದೇಶಹೊಂದಿರದೆ ಆರ್ಥಿಕ ಅಭಿವೃದ್ಧಿ ಮತ್ತು ದೂರದೃಷ್ಟಿಯನ್ನು ಹೊಂದಿತ್ತು. ಎನ್ ಡಿಎ ರಾಜಕೀಯ ಸಲುವಾಗಿ ಬಜೆಟ್ ಮಂಡಿಸಿದೆ. ಒಟ್ಟಾರೆ ರಾಜಕೀಯ ಸರ್ಕಸ್ಸಿನ ಬಜೆಟ್.” ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.


Spread the love