ಬಿಹಾರದಲ್ಲಿ ಆರ್‌ಜೆಡಿ ಅತಿ ದೊಡ್ಡ ಪಕ್ಷ; ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಮನವಿ: ತೇಜಸ್ವಿ ಯಾದವ್‌

Spread the love

ಬಿಹಾರದಲ್ಲಿ ಆರ್‌ಜೆಡಿ ಅತಿ ದೊಡ್ಡ ಪಕ್ಷ; ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಮನವಿ: ತೇಜಸ್ವಿ ಯಾದವ್‌

ನವದೆಹಲಿ: ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಗೆ ಕರ್ನಾಟಕದಲ್ಲಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ಬೆನ್ನಲೇ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಅಲ್ಲಿನ ರಾಜ್ಯಪಾಲರಲ್ಲಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಲು ಅವಕಾಶ ಕೋರಲು ನಿರ್ಧರಿಸಿದೆ.

ಬಿ.ಎಸ್‌.ಯಡಿಯೂರಪ್ಪ ಗುರುವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಬೆಂಗಳೂರಿನಲ್ಲಿ ಧರಣಿ ಕುಳಿತರು. ಗೋವಾದಲ್ಲಿ ಕಾಂಗ್ರೆಸ್‌ ಶಾಸಕರು ರಾಜ್ಯಪಾಲರ ಭೇಟಿಗೆ ಸಜ್ಜಾಗಿದ್ದರೆ, ಮತ್ತೊಂದು ಕಡೆ ಬಿಹಾರದಲ್ಲಿ ಆರ್‌ಜೆಡಿ ಕೂಡ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೋರಲಿದೆ.

‘ಬಿಹಾರದಲ್ಲಿ ಆರ್‌ಜೆಡಿ ಅತಿ ಹೆಚ್ಚು ಸ್ಥಾನ ಪಡೆದಿರುವ ಪಕ್ಷವಾಗಿದೆ. ಕರ್ನಾಟಕದಲ್ಲಿ ಅತಿ ದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಲಾಗಿದೆ. ಹಾಗಾಗಿ, ನಾವೂ ಸಹ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇವೆ.’ ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹರಣವನ್ನು ವಿರೋಧಿಸಿ ಶುಕ್ರವಾರ ಒಂದು ದಿನದ ಧರಣಿ ನಡೆಸುವುದಾಗಿ ಘೋಷಿಸಿದ್ದಾರೆ.


Spread the love