ಬೆಳಗಾವಿ ಮೂಲದ ಬಾಲಕಿ ಕೊಲೆ ಪ್ರಕರಣ – ಆರೋಪಿ ಬಂಧನ
ಮಂಗಳೂರು: ಪಣಂಬೂರು ಜೋಕಟ್ಟೆಯಲ್ಲಿ ನಡೆದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ಪರಸಘಡ ಹಂಚಿನಾಳದ ಹಣಮಪ್ಪ ಅವರ ಮಗ ಫಕೀರಪ್ಪ(51)ನನ್ನು ಬಂಧಿತ. ಈತ ಜೋಕಟ್ಟೆ ವಿಜಯ ವಿಠ್ಠಲ ಭಜನ ಮಂದಿರ ಹಿಂದೆ ವಾಸಿಸುತ್ತಿದ್ದು, ಜೋಕಟ್ಟೆ ಪರಿಸರದಲ್ಲಿ ದಿನಗೂಲಿ ಕೆಲಸ ಮಾಡಿಕೊಂಡಿದ್ದ.
ಮೃತ 14 ವರ್ಷದ ಬಾಲಕಿಯ ಚಿಕ್ಕಪ್ಪನಿಗೆ ಆರೋಪಿಯು ಪರಿಚಿತನಾಗಿದ್ದು, ಬಾಡಿಗೆ ಮನೆಗೆ ಆಗಾಗ ಬಂದು ಹೋಗುತ್ತಿದ್ದ. ಆ. 6ರಂದು ಬೆಳಗ್ಗೆ ಬಾಲಕಿ ಒಬ್ಬಳೇ ಮನೆಯಲ್ಲಿರುವಾಗ ಬಂದಿದ್ದು, ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದ. ಬಾಲಕಿ ಇದಕ್ಕೆ ಪ್ರತಿರೋಧ ವ್ಯಕ್ತಪ ಡಿಸಿದ್ದುದಕ್ಕೆ ಬಾಲಕಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಲಭ್ಯ ಸುಳಿವು ಆಧರಿಸಿ ಪೊಲೀಸರು ಕಾರ್ಯಪ್ರವೃತ್ತರಾಗಿ ಒಂದೇ ದಿನದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಪ್ರಕರಣವನ್ನು ಅತೀ ಶೀಘ್ರದಲ್ಲಿ ಭೇದಿಸುವಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಐ.ಪಿ.ಎಸ್. ರವರ ಮಾರ್ಗದರ್ಶನದಂತೆ, ಸಿದ್ದಾರ್ಥ ಗೋಯಲ್, ಐ.ಪಿ.ಎಸ್. ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ), ಬಿ.ಪಿ ದಿನೇಶ್ ಕುಮಾರ್ ಡಿ.ಸಿ.ಪಿ. (ಅಪರಾಧ ಮತ್ತು ಸಂಚಾರ ವಿಭಾಗ), ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರವೀಶ್ ನಾಯಕ್ (ಪ್ರಭಾರ) ಮತ್ತು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಮನೋಜ್ ಕುಮಾರ್ ನಾಯ್ ರವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕಿ ಶ್ರೀಕಲಾ ಕೆ.ಟಿ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ. ಕೃಷ್ಣ, ಬಿ.ಕೆ. ಹೆಚ್.ಸಿ.ಗಳಾದ ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್ ,ಸಿಪಿಸಿ ಗಳಾದ ಶಶಿಕುಮಾರ್, ರಾಕೇಶ್, ರವರುಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.