ಬೆಳ್ತಂಗಡಿ: ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಮೃತ್ಯು

Spread the love

ಬೆಳ್ತಂಗಡಿ: ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಮೃತ್ಯು

ಬೆಳ್ತಂಗಡಿ: ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂದು ಗುರುತಿಸಲಾಗಿದೆ.

ವೇಣೂರು ಚರ್ಚ್ ನ ಕಾರ್ಯಕ್ರಮದ ಹಿನ್ನಲೆಯಲ್ಲಿ ಇವರು ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದ್ದು, ಬಳಿಕ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು.

ಕಿಂಡಿ ಅಣೆಕಟ್ಟಿನ ಸಮೀಪ ಇವರು ಸ್ನಾನಕ್ಕೆ ಇಳಿದಿದ್ದು, ನದಿ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕದಳದವರು ತೆರಳಿದ್ದು, ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು ಮೇಲೆತ್ತಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love