ಬ್ರಹ್ಮಾವರ, ಕಾಪುವಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ ಯಾಚನೆ

Spread the love

ಬ್ರಹ್ಮಾವರ, ಕಾಪುವಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ ಯಾಚನೆ

ಉಡುಪಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಬ್ರಹ್ಮಾವರ ಹಾಗೂ ಕಾಪುವಿನಲ್ಲಿ ಮತ ಪ್ರಚಾರ ಮಾಡಿದರು.

ಮಹೇಶ್ ಆಸ್ಪತ್ರೆಗೆ ಭೇಟಿ
ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ಆಸ್ಪತ್ರೆ ಮಹೇಶ್ ಆಸ್ಪತ್ರೆ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರ ಜೊತೆಗೂಡಿ ಭೇಟಿ ನೀಡಿ ಮಕ್ಕಳ ತಜ್ಞ ಮತ್ತು ಮಹೇಶ್ ಆಸ್ಪತ್ರೆಯ ವೈದಕೀಯ ನೀರ್ದೇಶಕರಾದ ಡಾ ರಾಕೇಶ್ ಅಡಿಗ , ಆಡಳಿತ ವರ್ಗ , ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಗೆಲ್ಲಿಸಲು ನಮ್ಮನ್ನು ಬೆಂಬಲಿಸುವಂತೆ ಮತಯಾಚಿಸಿದರು.

ಜಿ ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಭೇಟಿ
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭೇಟಿ ನೀಡಿ, ಅಲ್ಲಿನ ಆಡಳಿತ ವರ್ಗ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ, ಉಪನ್ಯಾಸ ವರ್ಗ , ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಉಪಸ್ಥಿತರಿದ್ದರು

ಸೈಂಟ್ ಮೇರಿಸ್ ಸೀರಿಯನ್ ಪಿಯು ಕಾಲೇಜಿಗೆ ಭೇಟಿ
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಸೇಂಟ್ ಮೇರೀಸ್ ಸೀರಿಯನ್ ಪಿಯು ಕಾಲೇಜಿಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭೇಟಿ ನೀಡಿ ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮತಯಾಚಿಸಿದರು .

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಕಾಲೇಜಿನ ಪ್ರಾಂಶುಪಾಲರಾದ ಡಾ ಮಂಜುನಾಥ್ ಉಡುಪ , ಡಾ ವಿದ್ಯಾಲತಾ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.

ಎಸ್ ಡಿಎಂ ಆಯುರ್ವೇದ ಕಾಲೇಜಿಗೆ ಭೇಟಿ
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಉದ್ಯಾವರದ ಪ್ರತಿಷ್ಠಿತ ಎಸ್ ಡಿಎಂ ಆಯುರ್ವೇದ ಕಾಲೇಜಿಗೆ ಶನಿವಾರ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಭೋಜೇಗೌಡರು ಭೇಟಿ ನೀಡಿ ತಮ್ಮನ್ನು ಬೆಂಬಲಿಸಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ವೇಳೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಲಾಲಾಜಿ ಮಂಡಲ್ , ಕಾಲೇಜಿನ ಪ್ರಾಂಶುಪಾಲರಾದ ಮಮತಾ ಸೇರಿದಂತೆ ಕಾಲೇಜಿನ ಆಡಳಿತವರ್ಗ ,ಉಪನ್ಯಾಸಕರು , ಸಿಬ್ಬಂದಿವರ್ಗ ಮತ್ತು ಪದವೀಧರ ಮತದಾರರು, ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ದರು.


Spread the love