ಭಾನುವಾರ ಬ್ರಹ್ಮಾವರಕ್ಕೆ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ

Spread the love

ಭಾನುವಾರ ಬ್ರಹ್ಮಾವರಕ್ಕೆ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ

ಬ್ರಹ್ಮಾವರ: ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜುಲೈ 24ರ ಆದಿತ್ಯವಾರ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದಲ್ಲಿರುವ ಬಂಟರ ಭವನದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

sr-hiremath

ಕಾರ್ಯಕ್ರಮದಲ್ಲಿ ವಿಶೇಷವಾಗಿ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಭಾಗವಹಿಸಲಿದ್ದು, ರಾಜ್ಯದ ಹೆಸರಾಂತ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭಾನುವಾರ ಬೆಳಿಗ್ಗೆ 10.00ಕ್ಕೆ ಸಮಾರಂಭ ಆರಂಭಗೊಳ್ಳಲಿದ್ದು ಸಮಾರಂಭದ ಅಧ್ಯಕ್ಷತೆಯನ್ನು ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವಾ ಕಾರ್ಯಕಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ವಡ್ಡರ್ಸೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್, ಬೆಳಗಾವಿಯ ಉದ್ಯಮಿ ರತ್ನಾಕರ ಶೆಟ್ಟಿ ಯರಗಟ್ಟಿ, ಮುಂಬೈನ ಉದ್ಯಮಿ ಜೆ. ರತ್ನಾಕರ ಶೆಟ್ಟಿ, ಬ್ರಹ್ಮಾವರ ಬಂಟರ ಸಂಘದ ಕಟ್ಟಡ ಸಮಿತಿಯ ಸಂಚಾಲಕ ಬಿ.ಭುಜಂಗ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.

ನಂತರ ವಡ್ಡರ್ಸೆ ದೃಷ್ಟಿಕೋನದಲ್ಲಿ ಪತ್ರಿಕೋದ್ಯಮ ವಿಚಾರ ಸಂಕಿರಣ ನಡೆಯಲಿದ್ದು, ಬ್ರಹ್ಮಾವರದ ಚಿಂತಕ ಜ್ಞಾನ ವಸಂತ ಶೆಟ್ಟಿ, ವಡ್ಡರ್ಸೆಯವರ ಒಡನಾಡಿ ಡಾ.ಪುಟ್ಟಸ್ವಾಮಿ ಬೆಂಗಳೂರು, ಪತ್ರಕರ್ತ ಚಿದಂಬರ ಬೈಕಂಪಾಡಿ, ಜೈ ಭಾರ್ಗವ ಬಳಗದ ರಾಜ್ಯಾಧ್ಯಕ್ಷ ಅಜಿತ್ ಶೆಟ್ಟಿ ಕಿರಾಡಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ನಂತರ ಪ್ರಸಕ್ತ ಕಾಲದಲ್ಲಿ ಪತ್ರಿಕೋಧ್ಯಮ ವಿಚಾರ ಸಂಕಿರಣ ನಡೆಯಲಿದ್ದು, ಕುಂದಾಪುರದ ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ, ಕೊಪ್ಪದ ರೈತ ಸಂಗಾತಿ ಪತ್ರಿಕೆಯ ಸಂಪಾದಕ ಸುಧೀರ್‍ಕುಮಾರ್ ಮುರೋಳ್ಳಿ, ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಭಾಗವಹಿಸಲಿದ್ದಾರೆ. ಬಳಿಕ ಕವರ್ ಸ್ಟೋರಿ ಖ್ಯಾತಿಯ ವಿಜಯಲಕ್ಷ್ಮೀ ಶಿಬರೂರು ಅವರು ವಿದ್ಯಾರ್ಥಿಗಳು, ಸಾರ್ವಜನಿಕರು ಜೊತೆಯಲ್ಲಿ ಸಂವಾದ ನಡೆಸಲಿದ್ದಾರೆ.

ಸಂಜೆ 4ರ ಸಮಾರೋಪ ಸಮಾರಂಭದಲ್ಲಿ ಕವರ್ ಸ್ಟೋರಿ ಖ್ಯಾತಿಯ ವಿಜಯಲಕ್ಷ್ಮೀ ಶಿಬರೂರು ಅವರನ್ನು ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋಧ್ಯಮ ಪ್ರಶಸ್ತಿ 2016 ಪ್ರದಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ, ಹಿರಿಯ ಪತ್ರಕರ್ತ ಈಶ್ವರ ದೈತೋಟ, ತುಳು ಸಾಹಿತ್ಯ ಅಕಾಡಮೆ ಅಧ್ಯಕ್ಷೆ ಶ್ರೀಮತಿ ಜಾನಕಿ ಬ್ರಹ್ಮಾವರ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯಕರ ಸುವರ್ಣ ಭಾಗವಹಿಸಲಿದ್ದಾರೆ.

ನಂತರ ಬಡಗುತಿಟ್ಟಿನ ಐದು ಮಂದಿ ಯಕ್ಷಗಾನ ಭಾಗವತರ ಗಾನ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷರು ವಿನಂತಿಸಿದ್ದಾರೆ.


Spread the love