ಭಾರಿ ಮಳೆ ಹಿನ್ನಲೆ ಆಗಸ್ಟ್ 9ರಂದು ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರಿ ಮಳೆ ಹಿನ್ನಲೆ ಆಗಸ್ಟ್ 9ರಂದು ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಸ್ನಾತಕೋತ್ತರ ಪದವಿವರೆಗೆ) ಆ.9ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ ಹರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜು. 9ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮ ಕೈಗೊಂಡಿರುವುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಸೇವೆ (1077)ಗೆ ದಿನದ 24 ಗಂಟೆಯೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶದಲ್ಲಿ ಸೂಚನೆ ನೀಡಿದ್ದಾರೆ.


Spread the love