ಮಂಗಳೂರಿನಲ್ಲಿ ದೈವ ಪಾತ್ರಿ ಮೇಲೆ ಹಲ್ಲೆ, ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ಮಂಗಳೂರು: ದೈವ ಪಾತ್ರಿಯೊಬ್ಬರನ್ನು ತಲೆ ಬೋಳಿಸಿ ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನಗರ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರದ ಬಿಕರ್ನಕಟ್ಟೆ ಎಂಬಲ್ಲಿ ಲೋಕೆಸ್ ಪೂಜಾರಿ ಎಂಬ ದೈವಪಾತ್ರಿಯನ್ನು ವೀಡಿಯೊದಲ್ಲಿ ಹಲ್ಲೆ ನಡೆಸಿದ್ದು ದಾಖಲಾಗಿದ್ದು, ಬಲವಂತವಾಗಿ ಕೂದಲನ್ನು ಕತ್ತರಿಸಿ ಹಲ್ಲೆ ನಡೆಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ನಡುವೆ ಹಿರಿಯರು ತಡೆಯಲು ಯತ್ನಿಸಿದರೂ ಯುವಕರ ಗುಂಪು ಲೋಕೇಶ್ ಮೇಲೆ ಹಲ್ಲೆ ನಡೆಸಿದೆ.ಈ ಘಟನೆ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಚರ್ಚೆಗೆ ಆರಂಭವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಯಾರೂ ಕೂಡ ಕಾನೂನನ್ನು ಕೈಗೆ ತೆಗೆದುಕೊಳ್ಳವ ಅಧಿಕಾರವನ್ನು ಹೊಂದಿಲ್ಲ ಎನ್ನುವ ಸಂದೇಶವನ್ನು ನೀಡಿದ್ದಾರೆ. ಯಾರೇ ಕೂಡ ಅಪರಾಧ ಮಾಡಿದ್ದರೆ ಅವರಿಗೆ ಶಿಕ್ಷೆಯಾಗುವುದು ಖಂಡಿತ ಅಲ್ಲದೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬದ್ದವಾಗಿದೆ ಎಂದು ಅವರು ಪೋಲಿಸರಿಗೆ ಸೂಚಿಸಿದ್ದಾರೆ.