ಮಂಗಳೂರು: ಆದರ್ಶ ಮಹಿಳಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ 

Spread the love

ಮಂಗಳೂರು: ಆದರ್ಶ ಮಹಿಳಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ 

ಮಂಗಳೂರು: ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಬೆಂಗಳೂರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡುವ ಆದರ್ಶ ಮಹಿಳಾ ರತ್ನ ರಾಜ್ಯ ಪ್ರಶಸ್ತಿಗೆ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ಸಮಾಜ ಸೇವಕಿ ಸಂಘಟಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ

ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮಾರ್ಚ್ ೯ ಬೆಂಗಳೂರಿನ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಅಡಿಟೋರಿಯಂನಲ್ಲಿ ನಡೆಯಲಿದೆ ಪ್ರಶಸ್ತಿ ಪ್ರಧಾನವನ್ನು ರಾಜ್ಯಸಭಾ ಸದಸ್ಯರು ಹಾಗೂ ಇನ್ಫೋಸಿಸ್ ಫೌಂಡೇಶನ್ ಸ್ಥಾಪಕ ಅಧ್ಯಕ್ಷರಾದ ಸುಧಾ ಮೂರ್ತಿ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಉತ್ತರ ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ರಂಗ ಕಲಾವಿದೆ ಹಾಗೂ ಮಾಜಿ ಸಚಿವೆ ಉಮಾಶ್ರೀ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌದರಿ ಸಮಾಜ ಸೇವಕಿ ಕುಸುಮ ಹನುಮಂತ ರಾಯಪ್ಪ ಮಾಜಿ ಉಪ ಮಹಾ ಮೇಯರ್ ಹೇಮಲತಾ ಗೋಪಾಲಯ್ಯ ಸಮಾಜ ಸೇವಕಿ ಶೈಲಜಾ ಸೋಮಣ್ಣ ಕನ್ನಡ ಚಲನಚಿತ್ರ ನಟಿ ರಮ್ಯಾ ಡಾ. ರಾಜಕುಮಾರ್ ಅವರ ಪುತ್ರಿ ಲಕ್ಷ್ಮಿ ಗೋವಿಂದರಾಜ್ ಕನ್ನಡ ಚಿತ್ರನಟ ನಟಿ ರೇಖಾದಾಸ್ ಅತಿಥಿಗಳಾಗಿ ಭಾಗವಹಿಸಿದ್ದಾರೆ.

ಡಾ. ಮಾಲತಿ ಶೆಟ್ಟಿ ಅವರು ೧೯ ವರ್ಷಗಳಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ೧೨ ವರ್ಷಗಳಿಂದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ. ಒಂಬತ್ತು ಕೃತಿಗಳನ್ನು ಬರೆದಿದ್ದಾರೆ. ಹಿರಿಯ ಕಿರಿಯ ಸಾಹಿತಿಗಳ ೪೨ ಕೃತಿಗಳನ್ನು ಈಗಾಗಲೇ ಅಮೃತ ಪ್ರಕಾಶ ಸರಣಿ ಕೃತಿಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಉಚಿತ ಸಾಹಿತ್ಯ ಅಭಿರುಚಿ ಕಾರ್ಯಕ್ರಮದಲ್ಲಿ ೧೦೩ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯಪ್ರಕಾಶ್ ಶೆಟ್ಟಿ ಜೊತೆ ಸಾಹಿತ್ಯ ನಂದನದಲ್ಲಿ ವಾಸವಾಗಿದ್ದಾರೆ ಹಲವಾರು ರಾಷ್ಟ್ರ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments