ಮಂಗಳೂರು: ಜ.28 ರಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ

Spread the love

ಮಂಗಳೂರು: ಜ.28 ರಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ

ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3064 ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೇಯನ್ನು ಜನವರಿ 28ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 12.30ಯವರೆಗೆ ಉಜಿರೆಯ 6 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ, ಹಾಗೂ ಕರೆಪತ್ರದ ಲಿಂಕ್ ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್ಲೋಡ್ ಮಾಡಿ ಅದರಲ್ಲಿ ನಮೂದಿಸಿರುವ ಸೂಚನೆ ಪ್ರಕಾರ ಲಿಖಿತ ಪರಿಕ್ಷೆಗೆ ಹಾಕರಾಗಬೇಕು.

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಪರಿಕ್ಷಾ ಕೇಂದ್ರಗಳು: ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ, ಶ್ರಿ ಮಂಜುನಾಥೇಶ್ವರ ಪದವಿ (ಡಿಗ್ರಿ)ಕಾಲೇಜು ಉಜಿರೆ, ಶ್ರೀ ಮಂಜುನಾಥೇಶ್ವರ ಪಿ.ಯು ಕಾಲೇಜು ಉಜಿರೆ, ಶ್ರೀ ಮಂಜುನಾಥೇಶ್ವರ ಐ.ಟಿ ಕಾಲೇಜು ಉಜಿರೆ, ಶ್ರಿ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಉಜಿರೆ, ಶ್ರೀ ಮಂಜುನಾಥೇಶ್ವರ ಸಿಬಿಎಸ್ಬಿ ಸ್ಕೂಲ್ ಉಜಿರೆ.

ವಸ್ತ್ರಸಂಹಿತೆ:
ಪುರುಷ ಮತ್ತು ತೃತಿಯಲಿಂಗ ಅಭ್ಯರ್ಥಿಗಳು ಅರ್ಧ ತೊಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್ಗಳು, ದೊಡ್ಡ ಬಟನ್ಗಳು ಇರುವ ಶರ್ಟ್ಗಳನ್ನು ಧರಿಸಬಾರದು.
ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸಬಾರದು, ಪರೀಕ್ಷಾ ಕೇಂದ್ರದೊಳಗೆ ಶೂ ಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಬಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.
ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love