ಮಂಗಳೂರು: ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ತರಬೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ

Spread the love

ಮಂಗಳೂರು: ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ತರಭೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ

ಮಂಗಳೂರು:  ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರಬೇಕು. 2024 ಡಿಸೆಂಬರ್ 31ಕ್ಕೆ 17 ವಷರ್À ತುಂಬಿರಬೇಕು. ಗರಿಷ್ಠ ವಯೋಮಿತಿ 30ವರ್ಷ ಕನಿಷ್ಠ 5 ವರ್ಷ , ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿಗೆ ಸೇರಲು ಅರ್ಜಿ ನಮೂನೆಯನ್ನು https://hfwcom.karnataka.gov.in   ವೆಬ್‍ಸೈಟ್‍ನಲ್ಲಿ ಹೋಂ ಪೇಜ್‍ನ ಕೆಳಭಾಗದ ( (Latest News – Read More)  ದಲ್ಲಿ ಪಡೆದುಕೊಳ್ಳಬೇಕು. ದ್ವಿಪ್ರತಿಯಲ್ಲಿ ಭರ್ತಿ ಮಾಡಿ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಕಾರಿಗಳ ಕಛೇರಿಗೆ ಸಲ್ಲಿಸಬೇಕು.

ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಮಾಹಿತಿಗಾಗಿ ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿ, ಮಂಗಳೂರು (ದೂರವಾಣಿ ಸಂಖ್ಯೆ 0824-2423672) ಅಥವಾ ಜಿಲ್ಲಾ ತರಬೇತಿ ಕೇಂದ್ರ ಸುರತ್ಕಲ್/ ವೆನ್‍ಲಾಕ್ ಆಸ್ಪತ್ರೆಯಲ್ಲಿರುವ ಸರಕಾರಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love