ಮಂಗಳೂರು : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ,ಬೆಂಗಳೂರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು.ವಕೀಲರಸಂಘ, ಜಿಲ್ಲಾಡಳಿತ, ಕಂದಾಯ ಇಲಾಖೆ, ಜಿಲ್ಲಾಪಂಚಾಯತ್,ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು,ಸಹಕಾರಿ ಸಂಸ್ಥೆಗಳು ಮತ್ತು ವಿದ್ಯುತ್ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 01-01-2015 ರಿಂದ 31-12-2015 ರವರೆಗಿನ ಮಾಸಿಕ ರಾಷ್ಟ್ರೀಯ ಜನತಾ ನ್ಯಾಯಾಲಯದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳ ಬಗ್ಗೆ ಮಾಸಿಕ ಜನತಾ ನ್ಯಾಯಾಲಯ ಏರ್ಪಡಿಸಲಾಗಿದೆ.
ಇದರ ಅನ್ವಯ ಈಗಾಗಲೇ ಜಿಲ್ಲೆಯಾದ್ಯಂತ ವಿಮಾ ಕಂಪನಿಗಳು, ಪರಿಹಾರ ಪಡೆಯಲು ಅಜರ್ಿ ಸಲ್ಲಿಸಿರುವ ಕಕ್ಷಿದಾರರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯವಾದಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಮೇ ಮತ್ತು ಜೂನ್-2015 ರ ಮಾಹೆಗಳಲ್ಲಿ ನಿದರ್ಿಷ್ಟವಾಗಿ ಇದೇ ವಿಷಯವಾಗಿ ಅಂದರೆ ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು ಮತ್ತು ವಿಮಾ ಕ್ಲೇಮುಗಳ ಪ್ರಕರಣಗಳ ಬಗ್ಗೆ ಹೆಚ್ಚಿನ ಪ್ರಕರಣಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ದಿನಾಂಕ 13-06-2015 ರಂದು ಜಿಲ್ಲೆಯಾದ್ಯಂತ ಬೃಹತ್ ಜನತಾ ನ್ಯಾಯಾಲಯ ಏರ್ಪಡಿಸಲಾಗಿದೆ. ಇದರ ಸದುಪಯೋಗವನ್ನು ಜಿಲ್ಲೆಯಾದ್ಯಂತ ವಿಮಾ ಕಂಪನಿಗಳು, ಪರಿಹಾರ ಪಡೆಯಲು ಅರ್ಜಿ ಸಲ್ಲಿಸಿರುವ ಕಕ್ಷಿದಾರರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯವಾದಿಗಳು ಪಡೆದುಕೊಳ್ಳಬಹುದಾಗಿದೆಯೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು/ಕಾರ್ಯದಶರ್ಿಗಳು ತಿಳಿಸಿರುತ್ತಾರೆ.