ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

Spread the love

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

ಮಂಗಳೂರು: ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಸಿಐಎಸ್ ಎಫ್, ಭದ್ರತಾ ಪಡೆಗಳು ಸಂಪೂರ್ಣ ಪರಿಶೀಲನೆ ನಡಸಿವೆ. ಇದೊಂದು ಹುಸಿ ಬೆದರಿಕೆ ಎನ್ನಲಾಗಿದ್ದು ಭದ್ರತಾ ತಪಾಸಣೆ ಹೆಚ್ಚಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ್ ಅವರ ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿ, ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾನೆ. ಕೂಡಲೇ ಅವರು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಬಾಂಬ್ ಕರೆಯಾಗಿದೆ ಎಂದು ದೃಢಪಟ್ಟಿದೆ.


Spread the love