ಮಂಗಳೂರು : ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ರೂ. 200 ದಂಡ
ಮಂಗಳೂರು : ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮುಖಗವಸು (ಮಾಸ್ಕ್) ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಬೆಳಿಗ್ಗೆ 10.30 ಗಂಟೆಗೆ ಮಹಾಪೌರರ ಅಧ್ಯಕ್ಷತೆಯಲ್ಲಿ ಮಾಸ್ಕ್ ದಿನವನ್ನಾಗಿ ಆಚರಿಸಿ ಪಾಲಿಕೆ ಕಚೇರಿ ಮುಂಭಾಗದಿಂದ ಎಂ. ಜಿ. ರಸ್ತೆ ವರಗೆ ಪಾದಯಾತ್ರೆ ನಡೆಯಿತು.
ಪಾದಯಾತ್ರೆಯ ಮೂಲಕ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕಡ್ಡಾಯವಾಗಿ ಮುಖ ಗವಸ್ಸು ಧರಿಸುವುದು, ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಹಾಪೌರ ದಿವಾಕರ್, ಉಪ ಮಹಾಪೌರ ವೇದಾವತಿ, ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ವಿವಿಧ ಸ್ಥಾಯೀ ಸಮಿತಿ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಮಾಸ್ಕ್ ಧರಿಸದಿದ್ದಲ್ಲಿ ರೂ. 200 ದಂಡ ವಿಧಿಸುವ ಬಗ್ಗೆ ಎಚ್ಚರಿಕೆಯನ್ನು ಕೂಡ ನೀಡಲಾಯಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದವರಿಗೆ ಕಳೆದ 2 ತಿಂಗಳಿನಿಂದ ಒಟ್ಟು 274 ಪ್ರಕರಣ ದಾಖಲಿಸಿ, ರೂ. 54,800 ದಂಡವನ್ನು ವಿಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದರು.