ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

Spread the love

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

ಮಂಗಳೂರು:  ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಈ ದಿನ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಹೊಂದಿಕೊಂಡು ಸಾಗಾಟ ಮಾಡುತ್ತಿದ್ದ   ಬೆಳ್ತಂಗಡಿ ತಾಲೂಕು ಕುಕ್ಕೇಡಿ ನಿವಾಸಿ  ಅಬುತಾಹಿರ್ @ ಅನ್ವರ್(25) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ 1,00,000/- ರೂ ಮೌಲ್ಯದ 4 ಕೆಜಿ ನಿಷೇಧಿತ ಮಾದಕ ವಸ್ತು ಗಾಂಜಾ, ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನ, ಹಾಗೂ ಮೊಬೈಲ್ ಫೋನ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 1,75,000/-ಆಗಬಹುದು. ಈ ಬಗ್ಗೆ  ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಗಾಂಜಾ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ನರೇಂದ್ರ, ಎಎಸ್ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Spread the love