ಮಂಗಳೂರು: ಸೈಬರ್ ವಂಚನೆ ಅಪರಾಧದಲ್ಲಿ ಭಾಗಿಯಾದ ಆರೋಪಿತರ ಬಂಧನ
ಮಂಗಳೂರು: ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿ ವಾಟ್ಸ್ ಆಫ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 77,96,322.08/- ಹಣವನ್ನು ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂದಿಸಿದಂತೆ ಪಿರ್ಯಾದಿದಾರರಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಗೆ ರೂ 26,27,114.4/- ಹಣ ವರ್ಗಾವಣೆಯಾಗಿದ್ದು, ನಂತರದಲ್ಲಿ ಸದ್ರಿ ಬ್ಯಾಂಕ್ ಖಾತೆಯಿಂದ ಕೇರಳ ಮೂಲದ ಉಮ್ಮರ್ ವಲಿಯ ಪರಂಬತ್ (41), ಎಂಬಾತನ ಬ್ಯಾಂಕ್ ಖಾತೆಗೆ ರೂ,6,00,000/- ರೂ ಹಣ ಬಂದಿದ್ದು, ಈ ಬಗ್ಗೆ ತನಿಖೆ ಕೈಗೊಂಡಾಗ ಕೇರಳದ ಕಣ್ಣೂರು ನಿವಾಸಿ ರಿಯಾಸ್ ಎಂ.ವಿ (45) ಎಂಬಾತನು ಹಣವನ್ನು ವರ್ಗಾವಣೆ ಮಾಡಿಸಿದ್ದು, ಹಣ ವಿಥ್ ಡ್ರಾ ಮಾಡಿಕೊಟ್ಟಲ್ಲಿ ಕಮಿಷನ್ ನೀಡುವುದಾಗಿ ತಿಳಿಸಿ ಹಣವನ್ನು ನೀಡಿ 6,00,000 ಲಕ್ಷ ಹಣವನ್ನು ವಿಥ್ ಡ್ರಾ ಮಾಡಿಕೊಂಡಿಸಿರುವುದಾಗಿ ತಿಳಿಸಿದ್ದು, ಸದ್ರಿ ಪ್ರಕರಣದಲ್ಲಿ ಭಾಗಿಯಾದ ಈ ಇಬ್ಬರು ಕೇರಳ ಮೂಲದ ವ್ಯಕ್ತಿಗಳನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಜರುಗಿಸಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸದ್ರಿ ಕಾರ್ಯಾಚರಣೆಯು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಐಪಿಎಸ್, ಡಿಸಿಪಿ (ಕಾಮತ್ತುಸು) ಸಿದ್ದಾರ್ಥ ಗೋಯಲ್, ಡಿಸಿಪಿ (ಅ&ಸಂ) ರವಿಶಂಕರ್ ರವರ ಮಾರ್ಗದರ್ಶನದಂತೆ ನಡೆದಿದ್ದು, ಸೆನ್ ಠಾಣಾಧಿಕಾರಿಯಾದ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಎಂ ಪಿ ಮತ್ತು ಪೊಲೀಸ್ ಉಪ ನಿರೀಕ್ಷಕರಾದ ಗುರಪ್ಪ ಕಾಂತಿ ರವರ ನೇತೃತ್ವದಲ್ಲಿ ಸದ್ರಿ ಪ್ರಕರಣದಲ್ಲಿ ಇನ್ನುಳಿದ ಆರೋಪಿತರ ಪತ್ತೆಗೆ ತನಿಖೆ ಮುಂದುವರೆದಿರುತ್ತದೆ.