ಮರ ಸಾಗಾಟದ ಲಾರಿ ಪಲ್ಟಿ ; ಇಬ್ಬರಿಗೆ ಗಾಯ
ಮಂಗಳೂರು: ನೀರು ಸರಬರಾಜು ಟ್ಯಾಂಕರನ್ನು ಓವರ್ಟೆಕ್ ಮಾಡುವ ಭರದಲ್ಲಿ ಕಟ್ಟಿಗೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯ ಬೋಳಿಯಾರಿನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಘಟನೆಯಿಂದ ಲಾರಿಯ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಬೆಳಿಗ್ಗೆ ಮೇಲ್ಕಾರಿನಿಂದ ಕೊಣಾಜೆ ಕಡೆಗೆ ಮರ ಸಾಗಾಟ ಮಾಡುತ್ತಿದ್ದ ಲಾರಿ ಎದುರಿನಲ್ಲಿ್ದ ಟ್ಯಾಂಕರನ್ನು ಒವರ್ ಟೇಕ್ ಮಾಡಲು ಮುಂದಾಗಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆಗೆ ಮಗುಚಿ ಬಿದ್ದಿದೆ. ಘಟನೆಯಿಂದ ಮೆಲ್ಕಾರ್- ಮುಡಿಪು ಕಡೆಗೆ ಸಂಚರಿಸುವ ವಾಹನಗಳೀಗೆ ಕೆಲಕಾಲ ಅಡ್ಡಿಯುಂಟಾಯಿತು.
ಸ್ಥಳಕ್ಕಾಗಮಿಸಿದ ಕೊಣಾಜೆ ಪೋಲಿಸರು ಲಾರಿಯನ್ನು ಕ್ರೇನ್ ಮೇಲೆತ್ತಲು ಕಲ್ಪಿಸಿ ಸುಗುಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.