ಮರವಂತೆ ಬೀಚ್ ನಲ್ಲಿ ಮಾದಕ ವಸ್ತು ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಐವರ ಬಂಧನ
ಉಡುಪಿ: ಮರವಂತೆ ಬೀಚ್ ಸಮೀಪ ಕಾರಿನಲ್ಲಿ ಎಮ್ ಡಿ ಎಮ್ ಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಬಂಧಿತರನ್ನು ಭಟ್ಕಳ ನಿವಾಸಿಗಳಾದ ಅಬ್ರಾರ್ ಶೇಖ್, ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ , ಮೊಹಮ್ಮದ್ ಜಿಯಾಮ್ ಬೆಳ್ಳಿ, ನೌಮನ್ ಮತ್ತು ಸಜ್ಜಾದ್ ಮುಸ್ತಕೀಮ್ ಕೆವಾಕ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್, ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪವನ್ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್ , ದಿಕ್ಷೀತ್, ನಿಲೇಶ್, ಮಾಯಪ್ಪ ಗಡದೆ ಮತ್ತು ಸುದೀಪ್ ರವರ ತಂಡ ಕುಂದಾಪುರ ತಾಲೂಕು ಮರವಂತೆ ಗ್ರಾಮದ ಮರವಂತೆ ಬೀಚ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMA ಪೌಡರ್ನ್ನು ಮಾರಾಟ ಮಾಡಲು ಹೊಂದಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಪರವಾನಿಗೆ ಇಲ್ಲದೇ, ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 15 ಗ್ರಾಂ 59 ಮಿಲಿ ಗ್ರಾಂ ತೂಕದ MDMA ಪೌಡರ್, ವಶಕ್ಕೆ ಪಡೆದಿದ್ದು MDMA ಪೌಡರ್ ಅಂದಾಜು ಮೌಲ್ಯ ರೂ. 78,000/- ಆಪಾದಿತರು ಬಳಸಿದ್ದ ಮೊಬೈಲ್ ಪೋನ್-5, ಅಂದಾಜು ಮೌಲ್ಯ ರೂ. 50,000/-, ಪಾರದರ್ಶಕ ಪ್ಲಾಸ್ಟಿಕ್ ಕವರ್-5, ಮಾದಕ ವಸ್ತು ಮಾರಾಟ ಮಾಡಲು ಬಳಸಿದ ಕಾರನ್ನು ಮುಂದಿನ ಕ್ರಮದ ಬಗ್ಗೆ ವಶಪಡಿಸಿಕೊಂಡಿರುತ್ತಾರೆ.ವಶಪಡಿಸಿಕೊಂಡಿರುವ ಸ್ವತ್ತುಗಳ ಒಟ್ಟು ಅಂದಾಜು ಮೌಲ್ಯ ರೂ. 12,56,000/- ಆಗಿರುತ್ತದೆ.
ಈ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.