ಮಲ್ಪೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಘಟನೆ ಖಂಡನೀಯ : ಸಾಲಿಡಾರಿಟಿ ಉಡುಪಿ

Spread the love

ಮಲ್ಪೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಘಟನೆ ಖಂಡನೀಯ : ಸಾಲಿಡಾರಿಟಿ ಉಡುಪಿ

ಉಡುಪಿ: ಮಲ್ಪೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಘಟನೆ ಖಂಡನೀಯವಾಗಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ರ ಕೈಗೊಳ್ಳಲು ಸಾಲಿಡಾರಿಟಿ ಉಡುಪಿ ಆಗ್ರಹಿಸಿದೆ.

ಮಹಿಳೆಯು ಮೀನು ಕದ್ದ ಆರೋಪದಡಿಯಲ್ಲಿ ಮರಕ್ಕೆ ಕಟ್ಟಿ ಹೊಡೆಯುವ ವೀಡಿಯೋವೊಂದು ವೈರಲಾಗಿದೆ. ಈ ಘಟನೆಯು ಅತ್ಯಂತ ಅಮಾನವೀಯವಾಗಿದ್ದು ಒಂದು ವೇಳೆ ಮಹಿಳೆ ತಪ್ಪು ಎಸಗಿದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು. ಆದರೆ ಈ ಘಟನೆಯಲ್ಲಿ ಅಮಾನವೀಯವಾಗಿ ವರ್ತಿಸಿ ಗುಂಪುಗೂಡಿ ಮರಕ್ಕೆ ಕಟ್ಟಿ ಥಳಿಸಲಾಗಿದೆ. ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ ಹಾಗಾಗಿ ಸರಕಾರ ಕೂಡಲೇ ಇಂತಹ ಕೃತ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ತಪ್ಪಿಸ್ಥರನ್ನು ಬಂಧಿಸಿ ಮಹಿಳೆಗೆ ನ್ಯಾಯ ಒದಗಿಸಿಕೊಡಬೇಕೆಂದು ಈ ಮೂಲಕ ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಜಿಲ್ಲಾಧ್ಯಕ್ಷರಾದ ಅಫ್ವಾನ್ ಹೂಡೆ ಆಗ್ರಹಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments