ಮಹಾನಗರ ಪಾಲಿಕೆಯಲ್ಲಿ ಪ್ರಬಲ ವಿರೋಧ ಪಕ್ಷವಾಗಿ ಕಾಂಗ್ರೆಸ್ ನಿರ್ವಹಣೆ: ಕೆ.ಹರೀಶ್ ಕುಮಾರ್
ಮಂಗಳೂರು: ಅಧಿಕಾರದಲ್ಲಿ ಇಲ್ಲದಿದ್ದರೂ ಪ್ರಬಲ ವಿರೋಧ ಪಕ್ಷವಾಗಿ ಕಾಂಗ್ರೆಸ್ನ 14 ಕಾರ್ಪೋರೇಟರ್ಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದರು.
ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜರುಗಿದ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ವಿಜೇತ ಕಾರ್ಪೋರೇಟರ್ಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಚುನಾವಣೆ ಅಂತಿಮವಲ್ಲ, ಸೋಲು ಶಾಶ್ವತವಲ್ಲ. ರಾಜ್ಯದಲ್ಲಿಯೇ ಕಾಂಗ್ರೆಸ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಧಿಕ ಸ್ಥಾನಗಳನ್ನು ಗಳಿಸಿ ಪ್ರಥಮ ಸ್ಥಾನದಲ್ಲಿದ್ದು, ಜನರು ಕಾಂಗ್ರೆಸ್ನತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದರು. ಮಂಗಳೂರು ಮ.ನ.ಪಾಲಿಕೆ ಚುನಾವಣೆಯಲ್ಲಿ ಪಕ್ಷಕ್ಕೆ ಅನಿರೀಕ್ಷಿತ ಹಿನ್ನೆಡೆಯಾಗಿದ್ದು, ಪರಾಮರ್ಶೆಯ ಮೂಲಕ ಪಕ್ಷದ ಬಲವರ್ಧನೆಗೆ ಯೋಜನೆ ರೂಪಿಸಲಾಗುವುದು ಎಂದರು.
ಸಭೆಯ ಪ್ರಾರಂಭದಲ್ಲಿ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ| ಶ್ರೀಮತಿ ಇಂದಿರಾಗಾಂಧಿಯವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಲಾಯಿತು.
ಸಭೆಯಲ್ಲಿ ಮಾಜಿ ಸಚಿವ ಶ್ರೀ ಬಿ.ರಮಾನಾಥ ರೈ, ಮಾಜಿ ಶಾಸಕರಾದ ಜೆ.ಆರ್ ಲೋಬೋ, ಮೊೈದಿನ್ ಬಾವ, ಶಕುಂತಲಾ ಶೆಟ್ಟಿ, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ, ಕಾಂಗ್ರೆಸ್ ಮುಖಂಡರುಗಳಾದ ಮಿಥುನ್ ರೈ, ಇಬ್ರಾಹಿಂ ಕೋಡಿಜಾಲ್, ಕವಿತಾ ಸನಿಲ್, ಎನ್.ಎಸ್ ಕರೀಂ, ಶಾಲೆಟ್ ಪಿಂಟೋ, ಸುರೇಶ್ ಬಳ್ಳಾಲ್, ಸೇವಾದಳ ಅಶ್ರಫ್, ಪಿ.ವಿ ಮೋಹನ್, ಲೋಕೇಶ್ ಹೆಗ್ಡೆ, ಸದಾಶಿವ ಉಳ್ಳಾಲ್, ಬ್ಲಾಕ್ ಅಧ್ಯಕ್ಷರುಗಳಾದ ವಿಶ್ವಾಸ್ ಕುಮಾರ್ ದಾಸ್, ಧನಂಜಯ ಮಟ್ಟು, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಸದಾಶಿವ ಶೆಟ್ಟಿ, ಸುರೇಂದ್ರ ಬಿ.ಕಂಬಳಿ ಉಪಸ್ಥಿತರಿದ್ದರು. ಕಾರ್ಯದರ್ಶಿಗಳಾದ ನಝೀರ್ ಬಜಾಲ್, ಶುಭೋದಯ ಆಳ್ವ, ಖಾಲಿದ್ ಉಜಿರೆ, ಪ್ರೇಮ್ನಾಥ್ ಬಳ್ಳಾಲ್ಭಾಗ್, ಸಿ.ಎಮ್ ಮುಸ್ತಫ ಸಹಕರಿಸಿದ್ದರು.
ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ವಿಜಯಿ ಅಭ್ಯರ್ಥಿಗಳಿಗೆ ಪಕ್ಷದ ಮುಖಂಡರು ಶಾಲು ಹೊದಿಸಿ, ಹೂಗುಚ್ಛ ನೀಡಿ ಸನ್ಮಾನಿಸಿದರು.