ಮಹಾನಗರಪಾಲಿಕೆ: 17ರಂದು ನೀರು ಇಲ್ಲ

Spread the love

ಮಹಾನಗರಪಾಲಿಕೆ: 17ರಂದು ನೀರು ಇಲ್ಲ
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ 18ಒಉಆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ನ್ನು ಶುಚಿಗೊಳಿಸಲು ಹಾಗೂ ಕೊಟ್ಟಾರ ಚೌಕಿ ಹೋಂಡಾ ಶೋ ರೂಂ ಎದುರು ಬದಿ 900 ಎಂ.ಎಂ. ವ್ಯಾಸದ ಮುಖ್ಯ ಕೊಳವೆಯಲ್ಲಿ ಸೋರುವಿಕೆ ಉಂಟಾಗಿದ್ದುಇದರ ದುರಸ್ತಿ ಕಾರ್ಯವನ್ನು ಜನವರಿ 17ರಂದು ಪೂರ್ವಾಹ್ನ ಗಂಟೆ 6 ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಂಳ್ಳಲಾಗಿದೆ.

ಈ ಅವಧಿಯಲ್ಲಿ ಮಂಗಳೂರು ನಗರ ಭಾಗಶ: ಪ್ರದೇಶ, ಕೋಡಿಕಲ್, ಕೊಟ್ಟಾರ ಜಲ್ಲಿಗುಡ್ಡ, ಕೂಳೂರು, ಪಣಂಬೂರು ಹಾಗೂ ಸುರತ್ಕಲ್, ಕಾಟಿಪಳ್ಳ ಪ್ರದೇಶಗಳಲ್ಲಿ ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.


Spread the love