ಮಿನಿವಿಧಾನಸೌಧ ಅವ್ಯವಸ್ಥೆಯನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ

Spread the love

ಮಿನಿವಿಧಾನಸೌಧದಲ್ಲಿನ ಅವ್ಯವಸ್ಥೆಯನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರು: ಮಿನಿವಿಧಾನಸೌಧದಲ್ಲಿನ ಅವ್ಯವಸ್ಥೆಯನ್ನು ವಿರೋಧಿಸಿ ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ದಕ್ಷಿಣ ಅಧ್ಯಕ್ಷ ವೇದವ್ಯಾಸ ಕಾಮತ್ ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ನಾಯಕರು ಅವಸರವಸರವಾಗಿ ಮಿನಿ ವಿಧಾನಸೌಧವ್ನನ್ನು ಇದುವರೆಗೆ ಅಲ್ಲಿ ಸೂಕ್ತ ವಿದ್ಯುಚ್ಛಕ್ತಿ ಹಾಗೂ ಜನರೇಟರ್ ವ್ಯವಸ್ಥೆ ಮಾಡಿಲ್ಲ. ಇಂದೂ ಕೂಡ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಕಟ್ಟಡದಲ್ಲಿ ವಿದ್ಯುತ್ ಕೈಕೊಟ್ಟಿತ್ತು. ಮೆಸ್ಕಾಂಗೆ ವಿದ್ಯುತ್ ಬಿಲ್ ಕಟ್ಟದ ಕಾರಣ ಸಂಪರ್ಕ ಕಡಿತಗೊಳಿಸಿದ್ದು, ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ವಿದ್ಯುಚ್ಛಕ್ತಿ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಹಿರಿಯ ನಾಗರಿಕರು ಹೆಚ್ಚಿನ ಸಮಸ್ಯೆಯನ್ನು ಅನುಭವಿಸಿದ್ದಾರೆ.

ಸಾರ್ವಜನಿಕರಿಗೆ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಲಭಿಸುವ ಸಲುವಾಗಿ ಮಿನಿ ವಿಧಾನಸೌಧವನ್ನು ನಿರ್ಮಿಸಲಾಗಿದ್ದು ಆದರೆ ಜನಸಾಮಾನ್ಯರು ಮಾತ್ರ ಇಲ್ಲಿ ವಿಪರೀತವಾದ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.ಜನಸಾಮಾನ್ಯರು ಜನನ ಮರಣ ಪ್ರಮಾಣ ಪತ್ರ ಪಡೆಯುಲೂ ಕೂಡ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಕಟ್ಟದ ಪಾರ್ಕಿಂಗ್ ವ್ಯವಸ್ಥೆಗೆ ಮೀಸಲಿರಿಸಿದ ಸ್ಥಳವನ್ನು ರೆಕೋರ್ಡ್ ರೂಂ ಆಗಿ ಬದಲಾಯಿಸಿದ್ದು, ಜನರಿಗೆ ವಾಹನ ನಿಲ್ಲಿಸಲು ಸ್ಥಳವಕಾಶವಿಲ್ಲದಂತೆ ಮಾಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಸದಾ ಕಾಂಗ್ರೆಸ್ ಪಾರದರ್ಶಕ ಆಡಳಿತ ನೀಡುತ್ತಿರುವುದಾಗಿ ಹೇಳು್ತಿದ್ದು, ಅದನ್ನು ನಿಜವಾಗಿ ಕಾರ್ಯರೂಪಕ್ಕೆ ತರುವಲ್ಲಿ ಮಾತ್ರ ವಿಫಲರಾಗಿದ್ದಾರೆ. ಕಟ್ಟಡಕ್ಕೆ ಸೂಕ್ತ ಕಾವಲುಗಾರ ಸಿಬಂದಿಯನ್ನು ಜಿಲ್ಲಾಡಳಿತ ನೇಮಿಸದ ಕಾರಣ ಕಟ್ಟಡ ಅನೈತಿಕ ಚಟುವಟಿಕೆಗಳಿಗೆ ಉಪಯೋಗವಾಗುತ್ತಿದೆ. ಇದಕ್ಕೆಲ್ಲಾ ಕಡಿವಾಣ ಹಾಕಲು ಜಿಲ್ಲಾಡಳಿತ ವಿಫಲವಾದಲ್ಲಿ ಬಿಜೆಪಿ ತೀವ್ರತರನಾದ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ನಾಯಕರಾದ ಮೋನಪ್ಪ ಭಂಡಾರಿ, ಜಿತೇಂದ್ರ ಕೊಟ್ಟಾರಿ, ಗ್ಲಾಡ್ನಿನ್ ಡಿಮೆಲ್ಲೊ, ಸಂಜಯ್ ಪ್ರಭು ಹಾಗೂ ಇತರರು ಉಪಸ್ಥಿತರಿದ್ದರು.


Spread the love