ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

Spread the love

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು
 

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.


Spread the love