Spread the love
ಮುಲ್ಕಿ ಗೇರು ಕಟ್ಟೆ ಕಾಲೇಜಿನ ಕಳವು ಆರೋಪಿ ಬಂಧನ
ಮುಲ್ಕಿ: ಮುಲ್ಕಿ ಠಾಣಾ ವ್ಯಾಪ್ತಿಯ ಕಾರ್ನಾಡು ಗೇರುಕಟ್ಟೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೆಲ ದಿನಗಳ ಹಿಂದೆ ಶಿಕ್ಷಕರ, ಪರೀಕ್ಷಾ ಮತ್ತು ವಾಚನಾಲಯ ಕೊಠಡಿಯ ಬಾಗಿಲಿನ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಅಪ್ರಾಪ್ತ ಬಾಲಕನಾಗಿದ್ದು, ಈತನಿಂದ 25000 ರೂ. ಮೌಲ್ಯದ ಲ್ಯಾಪ್ ಟಾಪ್ ಹಾಗೂ ಇತರ ಸೊತ್ತುಗಳನ್ನು ಮುಲ್ಕಿ ಪೋಲಿಸರು ವಶಪಡಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕಳವು ನಡೆದ ಬಗ್ಗೆ ಮುಲ್ಕಿ ಪೋಲಿಸ್ ಠಾಣೆಗೆ ದೂರು ನೀಡಲಾಗಿತ್ತ.
ಮಂಗಳೂರು ಪೋಲಿಸ್ ಕಮಿಷನರೇಟ್ ಸಹಾಯಕ ಪೋಲಿಸ್ ಆಯುಕ್ತ ರಾಜೇಂದ್ರ ಡಿ.ಎಸ್. ರ ಮಾರ್ಗದರ್ಶನದಲ್ಲಿ ಮುಲ್ಕು ಪೋಲಿಸ್ ಠಾಣೆಯ ನಿರೀಕ್ಷಕ ಅನಂತ ಪದ್ಮನಾಭ ನೇತೃತ್ವದಲ್ಲಿ ಉಪನಿರೀಕ್ಷಕ ಶೀಲತ್ ಅಲಗೂರು ಹಾಗೂ ಸಿಬಂಧಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Spread the love